Select Your Language

Notifications

webdunia
webdunia
webdunia
webdunia

ರಾಜಕೀಯ ಹತ್ಯೆ ತಡೆಯಲು ಸರಕಾರಕ್ಕೆ ಗೃಹ ಸಚಿವಾಲಯ ಸೂಚನೆ

ರಾಜಕೀಯ ಹತ್ಯೆ ತಡೆಯಲು ಸರಕಾರಕ್ಕೆ ಗೃಹ ಸಚಿವಾಲಯ ಸೂಚನೆ
ಬೆಂಗಳೂರು , ಮಂಗಳವಾರ, 25 ಜುಲೈ 2017 (16:38 IST)
ಬಿಜೆಪಿ ನಾಯಕರ ಮನವಿಗೆ ಸ್ಪಂದಿಸಿದ ಕೇಂದ್ರ ಸರಕಾರ ರಾಜಕೀಯ ಹತ್ಯೆಗಳನ್ನು ತಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಸಚಿವಾಲಯ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.
 
ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ರಾಜಕೀಯ ನಾಯಕರ ಹತ್ಯೆಗಳ ಬಗ್ಗೆ ಮಾಹಿತಿ ನೀಡಿ, ರಾಜ್ಯ ಸರಕಾರಕ್ಕೆ ಸೂಚನೆ ನೀಡುವಂತೆ ಮನವಿ ಮಾಡಿದ್ದರು.
 
ಮಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ರಾಜಕೀಯ ನಾಯಕರ ಹತ್ಯೆಯ ವಿವರಗಳು ಮತ್ತು ಅದನ್ನು ತಡೆಯಲು ಸರಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಮುಖ್ಯಕಾರ್ಯದರ್ಶಿಗೆ ಗೃಹ ಸಚಿವಾಲಯದ ಆಧೀನ ಕಾರ್ಯದರ್ಶಿ ಕಟ್ಟು ನಿಟ್ಟಿನ ಆದೇಶ ಜಾರಿ ಮಾಡಿದೆ.
 
ರಾಜ್ಯದಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ಗೃಹ ಸಚಿವಾಲಯ ನಿರ್ದೇಶನ ನೀಡಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯರಿಂದ ಕೀಳುಮಟ್ಟದ ರಾಜಕಾರಣ: ಕುಮಾರಸ್ವಾಮಿ