ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ ಇಲ್ಲವಾದ್ರೆ ರಾಜೀನಾಮೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನೀರಾವರಿ ಖಾತೆ ಸಚಿವ ಎಂ.ಬಿ.ಪಾಟೀಲ್‌ಗೆ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಬಹಿರಂಗ ಪತ್ರ ಬರೆದಿದ್ದಾರೆ.
ಕಾವೇರಿ ವಿವಾದ ಕುರಿತಂತೆ ಸಿಎಂ ಸಿದ್ದರಾಮಯ್ಯ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ. ರಾಜ್ಯ ಸರಕಾರ ಮುಂಜಾಗ್ರತೆ ಕ್ರಮ ಕೈಗೊಳ್ಳದಿರುವುದರಿಂದಲೇ ಇಂದು ತಮಿಳುನಾಡಿಗೆ ನೀರು ಹರಿಸುವ ಪರಿಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಸಂಕಷ್ಟವನ್ನು ಅರಿಯದ ರಾಜ್ಯ ಸರಕಾರ, ರೈತರ ಹಿತವನ್ನು ಬದಿಗೊತ್ತಿ ಸುಪ್ರೀಂಕೋರ್ಟ್ ಆದೇಶ ಪಾಲಿಸಲು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ. ಕಾವೇರಿ ಕಣಿವೆಯ ರೈತರು ದಿವಾಳಿಯಾಗಲಿದ್ದಾರೆ ಎಂದು ಕಿಡಿಕಾರಿದರು.
ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ಮನವರಿಕೆ ಮಾಡಿಕೊಡಿ. ಇಲ್ಲವಾದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ತೊಲಗಲಿ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ