BBMP ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದೆ.. ಕಳೆದ 6 ತಿಂಗಳಲ್ಲಿ 15 ಸಾವಿರಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದೆ. ಇದರಿಂದ ವೃದ್ಧರು, ಮಕ್ಕಳು ಮನೆಗಳಿಂದ ಹೊರ ಬರಲು ಆತಂಕ ಪಡುವಂತ ಪರಿಸ್ಥಿತಿ ಇದೆ. ಪಾಲಿಕೆಯ 8 ವಲಯಗಳಲ್ಲಿಯೂ ಒಂದು ಸಾವಿರಕ್ಕಿಂತ ಕಡಿಮೆ ಇಲ್ಲದಂತೆ ನಾಯಿ ಕಚ್ಚಿದ ಪ್ರಕರಣಗಳು ಈವರೆಗೆ ದಾಖಲಾಗಿದ್ದು, ನಿತ್ಯ ಸರಾಸರಿ 70ಕ್ಕೂ ಹೆಚ್ಚು ಮಂದಿ ಮೇಲೆ ಬೀದಿ ನಾಯಿಗಳು ದಾಳಿ ಮಾಡುತ್ತಿವೆ ಎನ್ನಲಾಗಿದೆ. ಪಾಲಿಕೆಯ ಮೂಲಗಳ ಪ್ರಕಾರ 2020 ಜನವರಿಯಿಂದ ಈವರೆಗೆ ಸುಮಾರು 52 ಸಾವಿರಕ್ಕೂ ಹೆಚ್ಚು ಜನರ ಮೇಲೆ ನಾಯಿಗಳು ದಾಳಿ ಮಾಡಿವೆ..8 ವಲಯಗಳಲ್ಲಿ ನಿತ್ಯ 800 ನಾಯಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವ ಗುರಿಯನ್ನು ಈ ಹಿಂದೆ ನೀಡಲಾಗಿತ್ತು. ಇದೀಗ ನಿತ್ಯ 160-200 ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಪ್ರತಿ ನಾಯಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲು1200 ಖರ್ಚು ಮಾಡಲಾಗುತ್ತಿದೆ. ಆದರೆ ನಾಯಿಗಳ ಸಂತಾನ ಮಾತ್ರ ನಿಯಂತ್ರಣಕ್ಕೆ ಬರದಿರುವುದು BBMPಗೆ ತಲೆ ನೋವಾಗಿ ಪರಿಣಮಿಸಿದೆ.