Publish Date: Sun, 26 Sep 2021 (21:36 IST)
Updated Date: Sun, 26 Sep 2021 (21:41 IST)
ಬೆಂಗಳೂರು: ರೈತ ಸಂಘಟನೆಗಳು ಕರೆ ಕೊಟ್ಟಿರುವ ಭಾರತ್ ಬಂದ್ ಸಂದರ್ಭದಲ್ಲಿ ಯಾರಾದರೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದರೆ, ಬಲವಂತವಾಗಿ ಬಂದ್ ಮಾಡಿಸಲು ಮುಂದಾದರೆ ಅಂಥವರ ವಿರುದ್ಧ ಘಟನೆ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಕಮಲಪಂಥ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೋವಿಡ್-19 ನಿಯಮ ಜಾರಿಯಲ್ಲಿದೆ. ಅದರನ್ವ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಯಾವುದೇ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆಯದಂತೆ ಸೋಮವಾರ ಬೆಳಗ್ಗೆಯಿಂದಲೇ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಬಂದೋಬಸ್ತ್ ಗಾಗಿ 4 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.