ಬೆಂಗಳೂರು: ಪಾಕಿಸ್ತಾನ ಹಾಗೂ ಭಾರತ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದ ಹಾಗೇ ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.
ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು ಎಂದು ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಅಧಿಕಾರಿಗಳ ಜೊತೆಗೆ ಮಾತನಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ. ರಾಜ್ಯದ ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಿ ಎಂದು ತಿಳಿಸಿದ್ದಾರೆ.
ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಿ ಎಂದು ಅಧಿಕಾರಗಳಿಗೆ ಸೂಚನೆ ನೀಡಿದ್ದಾರೆ. ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು ಎಂದರು.
ಯಾವುದೇ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರಬೇಕು. ಪ್ರಮುಖ ಸ್ಥಳಗಳಲ್ಲಿ Mock Drill ಮಾಡಲು ಸೂಚನೆ ನೀಡಲಾಗಿದೆ. ರಾಷ್ಟ್ರೀಯ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ಕಾಪಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.