Select Your Language

Notifications

webdunia
webdunia
webdunia
webdunia

ಹಾಸನ ದುರಂತಕ್ಕೆ ಕೋಮುಬಣ್ಣ ಹಚ್ಚಿದರೆ ಕಠಿಣ ಕ್ರಮ: ಸಚಿವ ಕೃಷ್ಣ ಬೈರೇಗೌಡ ವಾರ್ನಿಂಗ್‌

Minister Krishna Byre Gowda, Ganesh Visarjana Parade, Communal

Sampriya

ಹಾಸನ , ಶನಿವಾರ, 13 ಸೆಪ್ಟಂಬರ್ 2025 (15:47 IST)
ಹಾಸನ: ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ದುರಂತ ನಿಜಕ್ಕೂ ದುರದೃಷ್ಟಕರ. ಇದಕ್ಕೆ ಕೋಮುಬಣ್ಣ ಹಚ್ಚಲು ಯತ್ನಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಖಡಕ್‌ ವಾರ್ನಿಂಗ್‌ ನೀಡಿದರು.

ಟ್ರಕ್‌ ಚಾಲಕ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುತ್ತ ಕೆಲವು ವಿಪಕ್ಷದವರು ಈ ಘಟನೆಗೆ ಕೋಮು ಬಣ್ಣ ನೀಡುತ್ತಿರುವುದೂ ಕಂಡುಬಂದಿದೆ. ಅಂಥವರ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಟ್ರಕ್‌ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಈ ದುರಂತಕ್ಕೆ ಮುಖ್ಯ ಕಾರಣ. ಈಗಾಗಲೇ ಆತನ ವಿರುದ್ಧ ಗೋರೂರ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದರು.

ಜನರಿಂದ ತೀವ್ರ ಥಳಿತಕ್ಕೊಳಪಟ್ಟವನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ವಿರುದ್ಧ ಎಲ್ಲ ರೀತಿಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು. 

ಈ ಭಾಗದಲ್ಲಿ ರಸ್ತೆಯನ್ನು ವೈಜ್ಞಾನಿಕವಾಗಿ ನಿರ್ಮಿಸಿಲ್ಲ. ಹೀಗಾಗಿ, ರಸ್ತೆಯನ್ನು ಮತ್ತಷ್ಟು ವಿಸ್ತರಣೆ ಮಾಡಬೇಕು ಎಂಬ ಕೂಗೂ ಹಿಂದಿನಿಂದಲೂ ಕೇಳಿಬರುತ್ತಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸರ್ಕಾರದ ಪರವಾಗಿ ನಾನು ಹಾಗೂ ಸಂಸದ ಶ್ರೇಯಸ್ ಎಂ. ಪಟೇಲ್‌ ಪತ್ರ ಬರೆಯುತ್ತೇವೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಜಾತಿಗಣತಿಗೆ 425 ಕೋಟಿ ರೂ ಖರ್ಚು, ಉಪಯೋಗವಾದ್ರೆ ಸಾಕು: ಬಿವೈ ವಿಜಯೇಂದ್ರ