ಹಾಸನ ದುರಂತಕ್ಕೆ ಕೋಮುಬಣ್ಣ ಹಚ್ಚಿದರೆ ಕಠಿಣ ಕ್ರಮ: ಸಚಿವ ಕೃಷ್ಣ ಬೈರೇಗೌಡ ವಾರ್ನಿಂಗ್‌

Sampriya
ಶನಿವಾರ, 13 ಸೆಪ್ಟಂಬರ್ 2025 (15:47 IST)
ಹಾಸನ: ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ದುರಂತ ನಿಜಕ್ಕೂ ದುರದೃಷ್ಟಕರ. ಇದಕ್ಕೆ ಕೋಮುಬಣ್ಣ ಹಚ್ಚಲು ಯತ್ನಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಖಡಕ್‌ ವಾರ್ನಿಂಗ್‌ ನೀಡಿದರು.

ಟ್ರಕ್‌ ಚಾಲಕ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುತ್ತ ಕೆಲವು ವಿಪಕ್ಷದವರು ಈ ಘಟನೆಗೆ ಕೋಮು ಬಣ್ಣ ನೀಡುತ್ತಿರುವುದೂ ಕಂಡುಬಂದಿದೆ. ಅಂಥವರ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಟ್ರಕ್‌ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಈ ದುರಂತಕ್ಕೆ ಮುಖ್ಯ ಕಾರಣ. ಈಗಾಗಲೇ ಆತನ ವಿರುದ್ಧ ಗೋರೂರ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದರು.

ಜನರಿಂದ ತೀವ್ರ ಥಳಿತಕ್ಕೊಳಪಟ್ಟವನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ವಿರುದ್ಧ ಎಲ್ಲ ರೀತಿಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು. 

ಈ ಭಾಗದಲ್ಲಿ ರಸ್ತೆಯನ್ನು ವೈಜ್ಞಾನಿಕವಾಗಿ ನಿರ್ಮಿಸಿಲ್ಲ. ಹೀಗಾಗಿ, ರಸ್ತೆಯನ್ನು ಮತ್ತಷ್ಟು ವಿಸ್ತರಣೆ ಮಾಡಬೇಕು ಎಂಬ ಕೂಗೂ ಹಿಂದಿನಿಂದಲೂ ಕೇಳಿಬರುತ್ತಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸರ್ಕಾರದ ಪರವಾಗಿ ನಾನು ಹಾಗೂ ಸಂಸದ ಶ್ರೇಯಸ್ ಎಂ. ಪಟೇಲ್‌ ಪತ್ರ ಬರೆಯುತ್ತೇವೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments