Select Your Language

Notifications

webdunia
webdunia
webdunia
webdunia

ಅಧಿಕ ಟಿಕೆಟ್​​​ ದರ ವಸೂಲಿ ಮಾಡಿದ್ರೆ ಕಠಿಣ ಕ್ರಮ

ಅಧಿಕ ಟಿಕೆಟ್​​​ ದರ ವಸೂಲಿ ಮಾಡಿದ್ರೆ ಕಠಿಣ ಕ್ರಮ
bangalore , ಶುಕ್ರವಾರ, 30 ಸೆಪ್ಟಂಬರ್ 2022 (14:31 IST)
ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಗೆ ತೊಂದರೆ ಕೊಡದೇ, ಯಾವ ಯಾವ ರೂಟ್‍ಗಳಿಗೆ ಎಷ್ಟು ದರ ನಿಗಧಿ ಪಡಿಸಿದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಹೆಚ್ಚಿನ ಹಣ ವಸೂಲಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಕುರಿತಿ ಸರಣಿ ಟ್ವೀಟ್​ ಮಾಡಿರುವ ಅವರು ಪ್ರಯಾಣಿಕರ ರಕ್ಷಣೆ ಸಾರಿಗೆ ಇಲಾಖೆಯ ಮೊದಲ ‌ಆದ್ಯತೆಯಾಗಿದೆ. ಕಿರಿಕಿರಿ ಉಂಟು  ಮಾಡುವುದು, ಇಲ್ಲವೇ ತೊಂದರೆ ಕೊಟ್ಟು ಹೆಚ್ಚಿನ ದರ ವಸೂಲಿ  ಮಾಡಿದರೆ ಸಹಿಸುವುದಿಲ್ಲ. ಹಾಗೊಂದು ವೇಳೆ ನನ್ನ ಗಮನಕ್ಕೆ ಬಂದರೆ ಅಂತಹ ಬಸ್ ಮಾಲೀಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶ್ರೀರಾಮುಲು ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲೇ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ  ಪ್ರಯಾಣಿಕರಿಂದ ಬೇಕಾಬಿಟ್ಟಿ  ದರ ವಸೂಲು ಮಾಡುವುದಕ್ಕೆ ಕಡಿವಾಣ ಹಾಕಲು ಈ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಈ ತಂಡ ಕಲಾಸಿಪಾಳ್ಯ ಬಸ್‌ ನಿಲ್ದಾಣ, ಮೆಜೆಸ್ಟಿಕ್‌ ಮತ್ತು ಸುತ್ತಲಿನ ಪ್ರದೇಶ, ಶಾಂತಿನಗರ, ಮೈಸೂರು ರಸ್ತೆ ಸೇರಿದಂತೆ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಲಿವೆ ಎಂದು ತಿಳಿಸಿದ್ರು. ಒಂದು ವೇಳೆ ಹೆಚ್ಚು ಟಿಕೆಟ್‌ ದರ ಕೇಳಿದರೆ ಪ್ರಯಾಣಿಕರು ಸಹಾಯವಾಣಿಗೆ ಕರೆ ಮಾಡಿ ಬಸ್‌ ನಂಬರ್‌, ಮಾರ್ಗ ತಿಳಿಸಿ ದೂರು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು‌. ಇದಕ್ಕಾಗಿ ಸಾರಿಗೆ ಇಲಾಖೆಯು ಸಹಾಯವಾಣಿಯನ್ನು ಆರಂಭಿಸಿದೆ. ಅದಕ್ಕೆ ಸಂಪರ್ಕಸಿಸಬಹುದು ಎಂದು  ಶ್ರೀರಾಮುಲು ತಿಳಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ