Publish Date: Thu, 25 Jan 2018 (07:39 IST)
Updated Date: Thu, 25 Jan 2018 (07:46 IST)
ಬೆಂಗಳೂರು: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಬಿಎಂಟಿಸಿ ಸೇವೆ ಸ್ಥಗಿತಗೊಂಡಿದೆ. ಇದರಿಂದ ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ. ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಜನ ಕಂಗಾಲಾಗಿದ್ದಾರೆ. ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರವೂ ಬಹುತೇಕ ಕಡಿಮೆಯಾಗಿದೆ. ಬೆರಳೆಣಿಕೆಯಷ್ಟೂ ಕೆ ಎಸ್ ಆರ್ ಟಿಸಿ ಬಸ್ ಗಳು ಸಂಚರಿಸುತ್ತಿದ್ದಾವೆ.
ಇನ್ನು ಈ ಬಂದ್ ನಿಂದ ಕಂಪೇಗೌಡ ವಿಮಾನ ನಿಲ್ದಾಣಕ್ಕೆ ಬಿಎಂಟಿಸಿ ವಾಯುವಜ್ರ ಬಸ್ ಆಗಮಿಸಲಿಲ್ಲ. ಅಲ್ಲಿಯೂ ಕೂಡ ಜನ ಪರದಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರು ಟ್ಯಾಕ್ಸಿಯ ಮೊರೆ ಹೋಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ