Publish Date: Tue, 23 Nov 2021 (13:37 IST)
Updated Date: Tue, 23 Nov 2021 (14:42 IST)
ಬೆಂಗಳೂರು : ವಿದ್ಯಾರ್ಥಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಜ್ವಲ್, ಅನಿಲ್ ಕುಮಾರ್, ದೀಪು ಸೇರಿದಂತೆ 6 ಮಂದಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿ ಅಭಿಷೇಕ್‌ನನ್ನು ಆರೋಪಿಗಳು ಅಪಹರಿಸಿದ್ದರು. ಅಭಿಷೇಕ್ ಸ್ನೇಹಿತರೇ ಅಪಹರಣಕ್ಕೆ ಪ್ಲ್ಯಾನ್ ಮಾಡಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಅಭಿಷೇಕ್ ಅಪಹರಿಸಿ ಕರೆದೊಯ್ದಿದ್ದರು. ಬಳಿಕ ಆತನನ್ನು ದೇವನಹಳ್ಳಿಗೆ ಕರೆದೊಯ್ದಿದ್ದ ಆರೋಪಿಗಳು, ಅಭಿಷೇಕ್ ತಂದೆಗೆ ಕರೆ ಮಾಡಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು.