Select Your Language

Notifications

webdunia
webdunia
webdunia
webdunia

ವಿವಿಪುರಂ ಕಾಲೇಜಿನ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

Student commits suicide by jumping from Vivipuram college building
bangalore , ಸೋಮವಾರ, 19 ಡಿಸೆಂಬರ್ 2022 (18:32 IST)
ವಿವಿ ಪುರನಲ್ಲಿರುವ  ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ  ಮಾಡಿಕೊಂಡಿದ್ದಾಳೆ.ಮೊದಲ ವರ್ಷದ ಎಲ್‌ಎಲ್‌ಬಿ ವ್ಯಾಸಂಗ ಮಾಡುತ್ತಿದ್ದ ವಾಣಿ ಎಂಬಾಕೆ ಮೃತ ದುರ್ದೈವಿ. ಇಂದು ಕಾಲೇಜು ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಳು.
ಕಾಲೇಜು ಆಡಳಿತ ಮಂಡಳಿಯವರು ಕೂಡಲೇ‌ ಕಿಮ್ಸ್  ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ತೀವ್ರ ರಕ್ತಸ್ರಾವದಿಂದಾಗಿ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿತ್ತು. ವೈದ್ಯರು ಚಿಕಿತ್ಸೆ ನೀಡಿದರಾದರೂ ಫಲಿಸದೇ ಮೃತಪಟ್ಟಿದ್ದಾಳೆ.
 
ಆತ್ಮಹತ್ಯೆಗೂ ಮುನ್ನ ಎರಡು ಪುಟಗಳ ಡೆತ್‌ನೋಟ್ ಬರೆದಿಟ್ಟಿರುವ ವಾಣಿ, ಮದುವೆ ವಿಚಾರಕ್ಕೆ ಬೇಸತ್ತು ಹೋಗಿದ್ದಳು ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಮದುವೆ ನಿಶ್ಚಯವಾಗಿ ಕ್ಯಾನ್ಸಲ್ ಆಗಿತ್ತಂತೆ. ಸದ್ಯ. ವಿವಿ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ವಿಚಾರಣೆಯನ್ನು ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಗರದಲ್ಲಿ ಕ್ರಿಸ್ ಮಸ್ ಹೊಸ ವರ್ಷಕ್ಕೆ ಭರ್ಜರಿ ಸಿದ್ಧತೆ..!