ಲಕ್ನೋ : ಸೀಟ್ ಗಾಗಿ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯನ್ನು ಗುಂಡಿಕ್ಕಿ ಕೊಂದ ಘಟನೆ ಬುಲಂದ್ ಶಹರ್ ಜಿಲ್ಲೆಯ ಶಿಕಾರ್ ಪುರ ಪಟ್ಟಣದ ಶಾಲೆಯೊಂದರಲ್ಲಿ ನಡೆದಿದೆ.
ತರಗತಿಯಲ್ಲಿ ಕುಳಿತುಕೊಳ್ಳುವ ಸೀಟ್ ಗಾಗಿ ಇಬ್ಬರು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದೆ. ಮರುದಿನ ಬಂದೂಕಿನೊಂದಿಗೆ ಶಾಲೆಗೆ ಬಂದ ಆರೋಪಿ ವಿದ್ಯಾರ್ಥಿ ತನ್ನೊಂದಿಗೆ ಜಗಳವಾಡಿದ ಸಹಪಾಠಿಗೆ ಗುಂಡು ಹಾರಿಸಿದ್ದಾನೆ. ಬಳಿಕ ಪರಾರಿಯಾಗಲು ಯತ್ನಿಸಿದಾಗ ಆತನನ್ನುಶಿಕ್ಷಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆದಲ್ಲಿಯೇ ಸಾವನಪ್ಪಿದ್ದಾನೆ, ಆರೋಪಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದ ಪೊಲೀಸರುನ ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿದ್ದಾರೆ.