Webdunia - Bharat's app for daily news and videos

Install App

ಉಪನ್ಯಾಸಕರಿಂದ ನಿಂದನೆ: ಮುಜುಗರಕ್ಕೊಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ

Webdunia
ಮಂಗಳವಾರ, 28 ಏಪ್ರಿಲ್ 2015 (16:06 IST)
ಉಪಾನ್ಯಾಸಕರು ನಿಂದಿಸಿದರು ಎಂಬ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಳ್ಳುವ ಮೂಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆ.ಆರ್.ಪುರಂನಲ್ಲಿ ನಿನ್ನೆ ರಾತ್ರಿ ನಡೆದಿದೆ. 
 
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಯಶಸ್ವಿನಿ(17) ಎನ್ನಲಾಗಿದ್ದು, ನಗರದ ಕೆ.ಆರ್.ಪುರಂ ನಿವಾಸಿಯಾಗಿದ್ದಾಳೆ. ಈಕೆ ನಗರದ ಜಿಟಿಟಿಸಿ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿನಿಯಾಗಿದ್ದು, ಅಭ್ಯಸುಸುತ್ತಿದ್ದಳು ಎನ್ನಲಾಗಿದೆ. 
 
ಘಟನೆ ವಿವರ: ಉಪಾನ್ಯಾಸಕರು ಪರೀಕ್ಷೆಗೆ ಅಗತ್ಯವಾದ ಕೆಲ ಸಾಮಗ್ರಿಗಳನ್ನು ನೀಡಿದ್ದರು ಎನ್ನಲಾಗಿದ್ದು, ಅದನ್ನು ವಿದ್ಯಾರ್ಥಿನಿ ಹಿಂದಿರುಗಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಕುಪಿತಗೊಂಡ ಉಪನ್ಯಾಸಕರು, ವಿದ್ಯಾರ್ಥಿನಿಯನ್ನು ಮನ ಬಂದಂತೆ ನಿಂದಿಸಿದ್ದಾರೆ. ಈ ಬಗ್ಗೆ ಮೃತ ವಿದ್ಯಾರ್ಥಿನಿಯು ತನ್ನ ಸಹಪಾಠಿಗಳೊಂದಿಗೆ ಹೇಳಿಕೊಂಡಿದ್ದು, ಬೇಸರವಾಗಿರುವುದಾಗಿ ವಿವರಿಸಿದ್ದಾಳೆ ಎಂದು ತಿಳಿದು ಬಂದಿದೆ. 
ನಿಂದಿಸಿದ ಉಪಾನ್ಯಾಸಕರನ್ನು ದೀಪಕ್ ಎನ್ನಲಾಗಿದ್ದು, ಅವರು ಇತರೆ ವಿದ್ಯಾರ್ಥಿಗಳನ್ನೂ ಕೂಡ ಇದೇ ರೀತಿಯಾಗಿ ನಿಂದಿಸುತ್ತಿದ್ದರು ಎಂಬುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.  
 
ಇನ್ನು ಇದೇ ಕಾರಣದಿಂದ ಬೇಸತ್ತು ನಮ್ಮ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸುತ್ತಿರುವ ವಿದ್ಯಾರ್ಥಿನಿಯ ಪೋಷಕರು, ಸರ್ಕಾರವು ಉಪಾನ್ಯಾಸಕರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. 
 
ನಗರದ ಬಡಾವಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments