Publish Date: Sat, 14 Sep 2019 (15:59 IST)
Updated Date: Sat, 14 Sep 2019 (16:01 IST)
ಚಲಿಸುತ್ತಿದ್ದ ರೈಲಿಗೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚಿಂತಾಮಣಿಯಲ್ಲಿ ರೈಲಿಗೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಸಮೀಪ ರೈಲುಕಿ ಸಿಲುಕಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಾಕವೇಲು ಹೋಬಳಿಯ ಕೊಂಡಮಾವರಪಲ್ಲಿ ಗ್ರಾಮದ ಚಿನ್ನಪ್ಪರೆಡ್ಡಿ ಎಂಬುವರ ಪುತ್ರ ಕೆಸಿ.ಮೋಹನ್ ಎಂದು ಗುರುತಿಸಲಾಗಿದೆ.
ವಿಷಯ ತಿಳಿದ ಕೂಡಲ್ಲೆ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಮತ್ತು ಬಂಗಾರಪೇಟೆ ರೈಲ್ವೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಬೆಳಗ್ಗೆ ಚಿಕ್ಕಬಳ್ಳಾಪುರದಿಂದ ಕೋಲಾರಕ್ಕೆ ಹೊರಟ್ಟಿದ್ದ ರೈಲಿಗೆ ವಿದ್ಯಾರ್ಥಿ ಸಿಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳದಲ್ಲಿ ವಿದ್ಯಾರ್ಥಿಯ ಆಧಾರ್ ಕಾರ್ಡ್ ಪತ್ತೆಯಾಗಿದೆ.