ಬೆಂಗಳೂರು: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಸಂಬಂಧ ಕಾಲೇಜಿನ ವಿಭಾಗದ ಮುಖ್ಯಸ್ಥ (ಎಚ್‌ಒಡಿ) ಸಂಜೀವ್ ಕುಮಾರ್ ಮಂಡಲ್ ಅವರನ್ನು ಅಮಾನತು ಮಾಡಲು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
19 ವರ್ಷದ ವಿದ್ಯಾರ್ಥಿನಿ ನೀಡಿದ ದೂರಿನ ಹಾಗೇ ಸಂಜೀವ್ ಕುಮಾರ್ ಮಂಡಲ್ ವಿರುದ್ಧ ತಿಲಕ್‌ನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75 ಅಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ವಿಚಾರಣೆಗೆ ಬಂದಾಗ ಆರೋಪಿಯನ್ನು ಬಂಧಿಸಿ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.
ಕಾಲೇಜಿನಲ್ಲಿ ಮೂರನೇ ವರ್ಷದ ಬಿಸಿಎ ವಿದ್ಯಾರ್ಥಿನಿಯನ್ನು ಸೆ.25ರಂದು ಸಂಜೀವ್ ಕುಮಾರ್ ಮಂಡಲ್ ಅವರು ಮನೆಯಲ್ಲಿ ಪತ್ನಿ ಹಾಗೂ ಮಕ್ಕಳು ಇರುವುದಾಗಿ ಹೇಳಿ ಊಟಕ್ಕೆ ಕರೆದುಕೊಂಡು ಹೋಗಿದ್ದರು.
ಆದರೆ, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಸಂಜೀವ್ ಕುಮಾರ್ ಮಂಡಲ್ ಮೇಲಿದೆ.