Publish Date: Mon, 15 Oct 2018 (16:45 IST)
Updated Date: Mon, 15 Oct 2018 (16:50 IST)
ಮೊಬೈಲ್ ಗಳಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ದುರ್ಘಟನೆ ಸಂಭವಿಸಿದೆ.
ಎನ್ ಎಸ್ ಎಸ್ ಶಿಬಿರಕ್ಕೆ ಹೋಗಿದ್ದ ಮೂವರು ವಿದ್ಯಾರ್ಥಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಧಾವಂತದಲ್ಲಿ ನೀರು ಪಾಲಾಗಿರುವ ಘಟನೆ ನಡೆದಿದೆ. ನೆಲಮಂಗಲ ಹತ್ತಿರದ ಹಳೆ ನಿಜಗಲ್ಲು ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ತುಮಕೂರಿನ ಸಿದ್ಧಗಂಗಾ ಬಾಲಕರ ಕಾಲೇಜಿನ ವಿದ್ಯಾರ್ಥಿಗಳಾದ ಪೂರ್ಣಚಂದ್ರ, ಮೊಹಮ್ಮದ್, ಶಶಾಂಕ್ ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ.
ಕಾಲೇಜಿನಿಂದ 50 ವಿದ್ಯಾರ್ಥಿಗಳು ಎನ್ ಎಸ್ ಎಸ್ ಶಿಬಿರಕ್ಕೆ ಬಂದಿದ್ದರು. ಅವರಲ್ಲಿ ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ನೀರಿನಲ್ಲಿ ನಿಂತಿದ್ದ ವೇಳೆ ಕಾಲು ಜಾರಿ ಒಬ್ಬ ನೀರಿಗೆ ಬಿದ್ದಿದ್ದಾನೆ, ಆತನನ್ನು ರಕ್ಷಣೆ ಮಾಡಲು ಮುಂದಾದ ಇತರ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.