Publish Date: Mon, 04 Apr 2022 (15:57 IST)
Updated Date: Mon, 04 Apr 2022 (16:59 IST)
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವೇಳೆ ಅಪಘಾತದಲ್ಲಿ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಒಂದೇ ಬೈಕ್ನಲ್ಲಿ ಪರೀಕ್ಷೆ ಬರೆಯಲು ಮೂವರು ವಿದ್ಯಾರ್ಥಿಗಳು ತೆರಳುತ್ತಿದ್ದರು.
ನವೀನ್ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಇದ್ದ ಶರತ್, ದರ್ಶನ್ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ಡಾ. ರಾಜೇಂದ್ರ ಪ್ರಸಾದ್ ಹೈಸ್ಕೂಲ್ ವಿದ್ಯಾರ್ಥಿಗಳು ಅಮೃತೂರಿಗೆ ತೆರಳುತ್ತಿದ್ದರು. ಈ ವೇಳೆ, ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಅಮೃತರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.