Publish Date: Tue, 08 Jan 2019 (18:11 IST)
Updated Date: Tue, 08 Jan 2019 (18:12 IST)
ವೈದ್ಯ ವಿದ್ಯಾರ್ಥಿಗಳು ಗಾಂಜಾ ಸೇವನೆ ಪ್ರಕರಣ ಹಿನ್ನಲೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ದಾವಣಗೆರೆ ಸಿಇಎನ್ ಅಪರಾಧ ಠಾಣೆ ಪೊಲೀಸರಿಂದ ಬಂಧನ ಮಾಡಲಾಗಿದೆ. ಕಾಲೇಜು ಮುಂಭಾಗದ ಅಂಗಡಿಯಲ್ಲಿ ಆರೋಪಿ ಗಾಂಜಾ ಮಾರಾಟ ಮಾಡುತ್ತಿದ್ದನು. ಪ್ರಮೋದ್ (28) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ
500 ಗ್ರಾಂ ಗಾಂಜಾ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಹರಿಹರ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ಇನ್ನೊಬ್ಬ ಆರೋಪಿಯನ್ನೂ ಬಂಧನ ಮಾಡಲಾಗಿದೆ. ಗುರುನಾಥ್(34) ಬಂಧಿತ ಆರೋಪಿ. ಹರಿಹರ ಗ್ರಾಮಾಂತರ ಠಾಣೆ ಪೊಲೀಸರಿಂದ ಬಂಧನ ಮಾಡಲಾಗಿದೆ.