Select Your Language

Notifications

webdunia
webdunia
webdunia
webdunia

ಶಾಲಾ-ಕಾಲೇಜು ವಿದ್ಯಾರ್ಥಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಳ್ಳುವಂತಿಲ್ಲ: ತನ್ವೀರ್ ಸೇಠ್

ಶಾಲಾ-ಕಾಲೇಜು ವಿದ್ಯಾರ್ಥಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಳ್ಳುವಂತಿಲ್ಲ: ತನ್ವೀರ್ ಸೇಠ್
ಬೆಂಗಳೂರು , ಶುಕ್ರವಾರ, 14 ಜುಲೈ 2017 (16:01 IST)
ಶಾಲಾ-ಕಾಲೇಜು ವಿದ್ಯಾರ್ಥಿಗಳು ಯಾವುದೇ ರೀತಿಯ ಸಂಘಟನೆಯಲ್ಲಿ ಗುರುತಿಸಿಕೊಳ್ಳದಂತೆ ಸುತ್ತೋಲೆ ಹೊರಡಿಸಲು ಶಿಕ್ಷಣ ಸಚಿವ ತನ್ವೀರ್ ಸೇಠ್ ಮುಂದಾಗಿದ್ದಾರೆ.

ವಿದ್ಯಾರ್ಥಿಗಳನ್ನ ಸಂಘಟನೆಗಳು ಬೇರೆ ಬೇರೆ ಸಂಘಟನೆಗಳು ಬಳಸಿಕೊಳ್ಳುತ್ತಿವೆ. ರಾಜಕೀಯವಾಗಿಯೂ ಬಳಸಿಕೊಳ್ಳುತ್ತಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳ ಹಿತಾದೃಷ್ಟಿಯಿಂದ ವಿದ್ಯಾರ್ಥಿಗಳು ಯಾವುದೇ ಸಂಘಟನೆಯಲ್ಲಿ  ಭಾಗವಹಿಸದಂತೆ ಸುತ್ತೋಲೆ ಹೊರಡಿಸಲು ನಿರ್ಧರಿಸಲು ನಿರ್ಧರಿಸಲಾಗಿದೆ. ಪ್ರತಿಭಟನೆ ಸೇರಿದಂತೆ ಹಲವು ಸಂದರ್ಭಗಳಲ್ಲಿ ಶಾಲೆಯ ವಿದ್ಯಾರ್ಥಿಗಳನ್ನ ಹೊರಕರುತ್ತಿರುವ ಬಗ್ಗೆ ದೂರುಗಳು ಬಂದಿವೆ. ಶಾಲೆ ಸೂಕ್ಷ್ಮ ಪ್ರದೇಶ, ಅಲ್ಲಿ ಶೈಕ್ಷಣಿಕ ಚಟುವಟಿಕೆ ಮಾತ್ರ ನಡೆಯಬೇಕು. ಅದರಲ್ಲೂ ಶಿಕ್ಷಕರು ಭೋದನೆ ಬಿಟ್ಟು ಬೇರೆ ಕೆಲಸವನ್ನ ಮಾಡಬಾರದು ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

ಕಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಸರ್ಕಾರ ಗಮನ ಹರಿಸಲಿ, ಅದನ್ನ ಬಿಟ್ಟು ರಾಜಕೀಯವಾಗಿ ಮಾತ್ರ ಯಾಕೆ ಯೋಚಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನ ತಪ್ಪು ದೃಷ್ಟಿಯಿಂದ ನೋಡಲಾಗುತ್ತಿದೆ. ಹವಿದ್ಯಾರ್ಥಿ ಶಕ್ತಿಯನ್ನ ತಡೆಹಿಡಿಯುವ ಪ್ರಯತ್ನವನ್ನ ಮಾಡಬಾರದು ಎಂದು ಎಬಿವಿಪಿ ಆಗ್ರಹಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಮತ್ತೊಬ್ಬ ಗಾಂಧೀಜಿಯಂತೆ: ಸಚಿವ ಮಹೇಶ್ ಶರ್ಮಾ