Select Your Language

Notifications

webdunia
webdunia
webdunia
webdunia

ಶುಲ್ಕ ಹೆಚ್ಚಳ ವಿರೋಧಿಸಿ ಬೆಂಗಳೂರು ವಿವಿ ಸಿಂಡಿಕೇಟ್ ಸಭೆಗೆ ಮುತ್ತಿಗೆ

ಶುಲ್ಕ ಹೆಚ್ಚಳ ವಿರೋಧಿಸಿ ಬೆಂಗಳೂರು ವಿವಿ ಸಿಂಡಿಕೇಟ್ ಸಭೆಗೆ ಮುತ್ತಿಗೆ
, ಶುಕ್ರವಾರ, 25 ಏಪ್ರಿಲ್ 2014 (12:34 IST)
ಬೆಂಗಳೂರು: ಬೆಂಗಳೂರು ವಿವಿ ಸಿಂಡಿಕೇಟ್ ಸಭೆ ನಡೆಯುತ್ತಿದ್ದಾಗ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿವೆ.  ವಿವಿ ಸಿಂಡಿಕೇಟ್ ಸಭೆಯಲ್ಲಿ ಮಹತ್ವದ ವಿಚಾರಗಳನ್ನು ಕುರಿತು ಚರ್ಚೆ ನಡೆಸಲಾಗುತ್ತಿತ್ತು. ಅಂಕಪಟ್ಟಿ ತಿದ್ದುಪಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಪರೀಕ್ಷಾ ಶುಲ್ಕ ಹೆಚ್ಚಳದ ಬಗ್ಗೆ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆಸುತ್ತಿದ್ದಾಗ ಎಬಿವಿಪಿ ಸೇರಿದಂತೆ ಕೆಲವು ವಿದ್ಯಾರ್ಥಿ ಸಂಘಟನೆಗಳು ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿವೆ.

ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಈ ಸಿಂಡಿಕೇಟ್ ಸಭೆ ನಡೆಯುತ್ತಿದ್ದಾಗ ಸೆಂಟ್ರಲ್ ಕಾಲೇಜಿನ ಹೊರಗೆ ಪರೀಕ್ಷಾ ಶುಲ್ಕ ಹೆಚ್ಚಳ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.

ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುತ್ತಿರುವ ಬೆಂಗಳೂರು ವಿವಿಗೆ ಧಿಕ್ಕಾರ ಎಂದು ವಿದ್ಯಾರ್ಥಿಗಳು ಘೋಷಣೆ ಕೂಗುತ್ತಾ ಪ್ರತಿಭಟಿಸಿದರು.

Share this Story:

Follow Webdunia kannada