Select Your Language

Notifications

webdunia
webdunia
webdunia
webdunia

ಶಾಲಾ ಮಕ್ಕಳು ಸಮವಸ್ತ್ರ ಧರಿಸಿ ಪರೀಕ್ಷೆ ಬರಿಯಬೇಕು

ಶಾಲಾ ಮಕ್ಕಳು ಸಮವಸ್ತ್ರ ಧರಿಸಿ ಪರೀಕ್ಷೆ ಬರಿಯಬೇಕು
ಬೆಂಗಳೂರು , ಭಾನುವಾರ, 27 ಮಾರ್ಚ್ 2022 (18:21 IST)
ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಎಲ್ಲಾ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗಿ ಎಂದು ಆರೋಗ್ಯ ಸಚಿವ ಸುಧಾಕರ್ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ಆದೇಶವನ್ನು ನಾವೆಲ್ಲರೂ ಪಾಲನೆ ಮಾಡಬೇಕು.
ಡಾ.ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನಕ್ಕೆ ನಾವೆಲ್ಲರೂ ಗೌರವ ನೀಡಬೇಕಿದೆ. ಶಾಲೆಗಳಲ್ಲಿನ ಸಮಾನ ಮನಸ್ಥಿತಿ, ಸಮಾನ ಮನೋಭಾವ ಹಾಗೇ ಇರಬೇಕು. ಪರೀಕ್ಷೆಯನ್ನು ಚೆನ್ನಾಗಿ ಬರೆದು ಉತ್ತಮ ಅಂಕ ಗಳಿಸಿ. ನಮ್ಮ ನಾಡು ಶಾಂತಿಯ ತೋಟ ಎಂದು ಕುವೆಂಪು ಹೇಳಿದ್ದಾರೆ. ಶಾಂತಿಯ ತೋಟಕ್ಕೆ ನೀವೆಲ್ಲರೂ ಪ್ರೇರಣೆ ಆಗಬೇಕು. ಜಾತ್ಯಾತೀತವಾಗಿ, ಧರ್ಮಾತೀತವಾಗಿ ನಮ್ಮ ಸರ್ಕಾರ ನಿಮ್ಮ ಜತೆಗೆ ಇದೆ ಎಂದರು. ಇನ್ನೂ ನಾಳೆಯಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಲಿದೆ. ಎಲ್ಲ ವಿದ್ಯಾರ್ಥಿಗಳೂ ಸಮವಸ್ತ್ರ ಧರಿಸಿಯೇ ಎಕ್ಸಾಂಗೆ ಹಾಜರಾಗಬೇಕು. ಹಿಜಾಬ್​ ಧರಿಸಿ ಬಂದವರಿಗೆ ಪರೀಕ್ಷೆಗೆ ಪ್ರವೇಶ ಇಲ್ಲ ಎಂದು ಶಿಕ್ಷಣ ಇಲಾಖೆ

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಭೂಕಂಪ : ಜನರಲ್ಲಿ ಆತಂಕ!