Select Your Language

Notifications

webdunia
webdunia
webdunia
webdunia

ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡ್ತಿದ್ದ ವಿದ್ಯಾರ್ಥಿಗಳು !

ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡ್ತಿದ್ದ ವಿದ್ಯಾರ್ಥಿಗಳು !
ಶಿವಮೊಗ್ಗ , ಭಾನುವಾರ, 25 ಜೂನ್ 2023 (11:51 IST)
ಶಿವಮೊಗ್ಗ : ತಾವು ವಾಸವಿದ್ದ ಬಾಡಿಗೆ ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಐವರು MBBS ವಿದ್ಯಾರ್ಥಿಗಳನ್ನ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ಅಬ್ದುಲ್ ಖಯ್ಯಂ, ಅರ್ಪಿತಾ, ವಿಘ್ನರಾಜ್, ವಿನೋದ್ ಕುಮಾರ್, ಪಾಂಡಿದೊರೈ ಬಂಧಿತ ಆರೋಪಿಗಳು. 

ಮನೆಯಲ್ಲೇ ಗಾಂಜಾ ಬೆಳೆಯುತ್ತಿದ್ರು

ಅಬ್ದುಲ್ ಖಯ್ಯಂ, ವಿಘ್ನರಾಜ್ ಹಾಗೂ ಅರ್ಪಿತಾ ಶಿವಮೊಗ್ಗದ ಶಿವಗಂಗಾ ಲೇಔಟ್ ನಲ್ಲಿ ವಾಸಕ್ಕೆ ಬಾಡಿಗೆ ಮನೆ ಪಡೆದಿದ್ದರು. ಅದೇ ಮನೆಯಲ್ಲೇ ಹೂ ಬೆಳೆಯುವ ಪಾಟ್ಗಳಲ್ಲಿ ಗಾಂಜಾ ಬೆಳೆದು, ಅದನ್ನು ಟೇಬಲ್ಫ್ಯಾನ್ ಗಾಳಿಯಿಂದ ಒಣಗಿಸಿ, ಪ್ಯಾಕೆಟ್ ಮಾಡಿ ಮಾರಾಟ ಮಾಡುತ್ತಿದ್ದರು. ಇವರ ಬಳಿ ಗಾಂಜಾ ಕೊಳ್ಳಲು ಪಾಂಡಿದೊರೈ ಹಾಗೂ ವಿನೋದ್ ಕುಮಾರ್ ಹೋಗಿದ್ದರು. 

 
ಖಚಿತ ಮಾಹಿತಿ ಮೇರೆಗೆ ಶಿವಗಂಗಾ ಲೇಔಟ್ ನಿವಾಸದ ಮೇಲೆ ದಾಳಿ ನಡೆಸಿದ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಆರೋಪಿಗಳಿಂದ 6 ಸಾವಿರ ರೂ. ಮೌಲ್ಯದ ಹಸಿ ಗಾಂಜಾ, 20 ಸಾವಿರ ರೂ. ಮೌಲ್ಯದ ಒಣ ಗಾಂಜಾ, 30 ಸಾವಿರ ರೂ. ಮೌಲ್ಯದ ಚರಸ್, ಸೀರಿಂಜ್ಗಳು, ಹುಕ್ಕಾ ಕೊಳವೆ, 6 ಟೇಬಲ್ ಫ್ಯಾನ್ ಸೇರಿದಂತೆ ಇತರೆ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇವಲ 485 ರೂ.ಗೆ ಇಬ್ಬರ ಕೊಲೆ ಮಾಡಿದ