Select Your Language

Notifications

webdunia
webdunia
webdunia
webdunia

ಅಧಿಕಾರ ಸ್ವೀಕರಿಸಿದ ನಂತರ ಅಧ್ಯಯನ-ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್

Study after taking charge
bangalore , ಶುಕ್ರವಾರ, 2 ಡಿಸೆಂಬರ್ 2022 (17:34 IST)
ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರ ಸಂಬಂಧ ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ  ಶಿವರಾಜ್ ಪಾಟೀಲ್ ನೇಮಕ ಕುರಿತು ಶಿವರಾಜ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ನನ್ನನ್ನು ಸರ್ಕಾರ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅದ್ಯಕ್ಷನ್ನಾಗಿ ಸರ್ಕಾರ ನೇಮಕ ಮಾಡಿದೆ. ನಾನು ಸೋಮವಾರ ಅಧಿಕಾರ ಸ್ವೀಕರಿಸುತ್ತೇನೆ, ಅಧಿಕಾರ ಸ್ವೀಕರಿಸಿದ ಮೇಲೆ ಗಡಿ ವಿವಾದಗಳ ಬಗ್ಗೆ ಅಧ್ಯಯನ ಮಾಡುತ್ತೇನೆ, ನಮ್ಮ ರಾಜ್ಯದ ಹಿತಾಸಕ್ತಿ ಕಾಪಾಡಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಮುಂದೆ ಏನು ಮಾಡಬೇಕು ಅನ್ನೋದನ್ನು ನಿರ್ಧಾರ ಮಾಡುತ್ತೇವೆ. ಗಡಿ ವಿವಾದ ಸುಪ್ರೀಂ ಕೋರ್ಟ್ ಮುಂದಿದೆ. ಅದನ್ನು ನೋಡಿ ಮುಂದಿನ ನಿರ್ಧಾರ ಮಾಡುತ್ತೇವೆ. ಗಡಿ ಮತ್ತು ನದಿಗಳನ್ನು ಕಾಪಾಡಲು ಬೇಕಾದ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಹಿತರಕ್ಷಣೆ ಮಾಡಿಕೊಳ್ಳಲು ಸಾಕಷ್ಟು ಅವಕಾಶ ಇದೆ, ಆ ಕೆಲಸ ಮಾಡುತ್ತೇವೆ ಅಂತಾ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ತಿಳಿಸಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಹಾವಳಿ ಇಟ್ಟ ಚಿರತೆ