Select Your Language

Notifications

webdunia
webdunia
webdunia
webdunia

ಸಬ್ ರಿಜಿಸ್ಟ್ರಾರ್ ಕಚೇರಿ ದುರಾಡಳಿತ ವರದಿ ನೀಡುವಂತೆ ಸೂಚನೆ

ಸಬ್ ರಿಜಿಸ್ಟ್ರಾರ್ ಕಚೇರಿ ದುರಾಡಳಿತ ವರದಿ ನೀಡುವಂತೆ ಸೂಚನೆ
ಬೆಂಗಳೂರು , ಮಂಗಳವಾರ, 19 ಜುಲೈ 2022 (17:30 IST)
ಕಂದಾಯ ಸಚಿವ ಅರ್. ಅಶೋಕ್ ಅವರ ವ್ಯಾಪ್ತಿಗೆ ಒಳಪಡುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ದುರಾಡಳಿತ ಪರಕಾಷ್ಠೆಗೆ ತಲುಪಿದೆ. ಉಪ ನೋಂದಣಾಧಿಕರಿಗಳ ಕಚೇರಿಗಳ ದುರಾಡಳಿತ, ಕರ್ತವ್ಯಲೋಪ, ನಿರ್ಲಕ್ಷ್ಯತೆ, ಜನ ಪರವಿಲ್ಲದ ಆಡಳಿತದ ಬಗ್ಗೆ ಸ್ವಯಂ ಪ್ರೇರಿತ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ನ್ಯಾ.
ಎಸ್. ಪಾಟೀಲ್ ಆದೇಶಿಸಿದ್ದಾರೆ.
 
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಒಳಗೊಂಡಂತೆ ಇಲಾಖೆಗಳ ಮುಖ್ಯಸ್ಥರು ಹಾಗೂ ಉಪ ನೋಂದಣಾಧಿಕಾರಿಗಳನ್ನು ಆರೋಪಿಯನ್ನಾಗಿ ಮಾಡಲಾಗಿದೆ. ಪ್ರತಿ ಉಪ ನೋಂದಣಾಧಿಕಾರಿ ಕಚೇರಿವಾರಿ ಅಲ್ಲಿನ ಅವ್ಯವಸ್ಥೆಗಳ ಪಟ್ಟಿ ಮಾಡಿರುವ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್, ಈ ಕುರಿತು ವರದಿ ಸಲ್ಲಿಸಲು ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಸೆ. 6 ರೊಳಗೆ ಉಪ ನೊಂದಣಾಧಿಕಾರಿ ಕಚೇರಿಯ ಅಕ್ರಮದ ಬಗ್ಗೆ ವರದಿ ನೀಡಲು ಸೂಚಿಸಿದ್ದಾರೆ.
 
ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ನ್ಯಾ. ಬಿ.ಎಸ್. ಪಾಟೀಲ್, ಉಪ ನೊಂದಣಾಧಿಕಾರಿಗಳ ಕಚೇರಿಗಳಲ್ಲಿನ ಭ್ರಷ್ಟಾಚಾರ ಬಗ್ಗೆ ಸಾರ್ವಜನಿಕರು ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು, ಲೋಕಾಯುಕ್ತ ನ್ಯಾಯಮೂರ್ತಿಗಳು ಬೆಂಗಳೂರಿನ ವಿವಿಧ ಉಪ ನೋಂದಣಾಧಿಕಾರಿ ಕಚೇರಿಗಳ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಉಪ ನೋಂದಣಾಧಿಕಾರಿಗಳ ಕಚೇರಿಯಗಳಲ್ಲಿನ ದುರಾಡಳಿತ ಬಯಲಿಗೆ ಬಂದಿತ್ತು. ಉಪ ನೊಂದಣಾಧಿಕಾರಿ ಕಚೇರಿಗಳಲ್ಲಿನ ದುರಾಡಳಿತ ಪಟ್ಟಿ ಮಾಡಿರುವ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಅವರು, ಉಪ ಲೋಕಾಯುಕ್ತ ನ್ಯಾ. ಕೆ.ಎನ್ ಫಣೀಂದ್ರ , ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಜತೆ ಚರ್ಚಿಸಿ ಅದರಂತೆ ಸ್ವಯಂ ಪ್ರೇರಿತ ಕೇಸು ದಾಖಲಿಸಿ ತನಿಖೆಗೆ ಸೂಚಿಸಿದ್ದಾರೆ. ಲೋಕಾಯುಕ್ತರ ಆದೇಶದ ಮೇರೆಗೆ ಸ್ವಯಂ ಪ್ರೇರಿತ ಕೇಸಿನ ತನಿಖೆಯೂ ಶುರುವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್. ಎಂ. ವಿಶ್ವೇಶ್ವರಯ್ಯ ಮೊಮ್ಮಗಳು ಚುನಾವಣೆಗೆ ಎಂಟ್ರಿ..!!