Publish Date: Sat, 09 Jul 2022 (15:12 IST)
Updated Date: Sat, 09 Jul 2022 (15:20 IST)
ನಾಪತ್ತೆ ಆಗಿದ್ದ ಮರಾಠಾ ಲಘು ಪದಾತಿ ದಳದ ಕಮಾಂಡೋ ಟ್ರೈನಿಂಗ್ ವಿಂಗ್ ನ ಸುಬೇದಾರ್ ಮೇಜರ್ ಸುರ್ಜಿತ್ ಸಿಂಗ್ ಅವರನ್ನು ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಒಂದು ತಿಂಗಳ ಬಳಿಕ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸುಬೇದಾರ್ ಮೇಜರ್ ಸುರ್ಜಿತ್ ಸಿಂಗ್ ಅವರು ನಾಪತ್ತೆಯಾಗಿದ್ದರಿಂದ ಸೇನಾ ವಲಯದಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸರು ಮತ್ತು ಸೇನೆಯ ಅಧಿಕಾರಿಗಳು ಶ್ರಮವಹಿಸಿ ಸೇನಾ ಅಧಿಕಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಸ್ವಸ್ಥ ಸ್ಥಿತಿಯಲ್ಲಿ ಸೇನಾಧಿಕಾರಿ ಶುಕ್ರವಾರ ಸಿಕ್ಕಿದ್ದಾರೆ.
ಕ್ಯಾಂಪ್ ಪ್ರದೇಶದಿಂದ ಕಳೆದ ತಿಂಗಳು 12ರಂದು ಮಧ್ಯಾಹ್ನ ಸುರ್ಜಿತ್ ಸಿಂಗ್ ನಾಪತ್ತೆ ಆಗಿದ್ದರು. ಎಟಿಎಂ ನಿಂದ ಹಣ ಪಡೆಯಲು ಹೋದವರು ಮರಳಿ ಬಂದಿರಲಿಲ್ಲ. ಮೊಬೈಲ್ ಟ್ರೆಸ್ ಮಾಡಿದರೂ ಸಿಕ್ಕಿರಲಿಲ್ಲ. ಸೇನಾಧಿಕಾರಿಯನ್ನು ಯಾರಾದರೂ ಅಪಹರಣ ಮಾಡಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿತ್ತು