ಉಪಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್. ಬಿ. ಆಡಿ ವಿರುದ್ಧದ ಆರೋಪಗಳು ನಿರಾಧಾರ ಎಂದು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರು ನೀಡಿರುವ ವರದಿ ಸ್ವೀಕರಿಸಿದ ಸ್ವೀಕರ್ ಕಾಗೋಡು ತಿಮ್ಮಪ್ಪ, ಉಪಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್ ಆಡಿ ವಿರುದ್ಧದ ನಿರ್ಣಯವನ್ನು ಕೈಬಿಡಲಾಗಿದೆ ಎಂದು ಸ್ವಷ್ಟಪಡಿಸಿದ್ದಾರೆ.
ಕಾನೂನಿನಲ್ಲಿ ಅವಕಾಶ ಇರುವುದರಿಂದ ಉಪಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್. ಬಿ. ಆಡಿ ವಿರುದ್ಧದ ನಿರ್ಣಯವನ್ನು ಅಂಗೀಕರಿಸಲಾಗಿದ್ದು, ತನಿಖೆ ನಡೆಸುವಂತೆ ಹೈಕೋರ್ಟ್ ಸಿಜೆ ಅವರಿಗೆ ವರ್ಗಾವಣೆ ಮಾಡಲಾಗಿತ್ತು ಎಂದು ಸ್ವೀಕರ್ ಕಾಗೋಡು ತಿಮ್ಮಪ್ಪ ಸ್ವಷ್ಟಪಡಿಸಿದ್ದಾರೆ.
ಉಪಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್. ಬಿ. ಆಡಿ ವಿರುದ್ಧದ ನಿರ್ಣಯವನ್ನು ರದ್ದುಗೊಳಿಸಿದ್ದರಿಂದ ರಾಜ್ಯ ಸರಕಾರಕ್ಕೆ ಮುಜುಗುರವಾಗಿದೇಯಾ ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸ್ವೀಕರ್ ಕಾಗೋಡು ತಿಮ್ಮಪ್ಪ, ಸರಕಾರಕ್ಕೆ ಮುಜುಗರ ಆಗಿದ್ಯಾ, ಅಥವಾ ಇಲ್ವಾ ಅಂತ ಅವರನ್ನೆ ಹೋಗಿ ಕೇಳಿ ಎಂದು ಹೇಳಿದರು.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
< >
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.< >