Select Your Language

Notifications

webdunia
webdunia
webdunia
webdunia

ಪ್ರಜ್ವಲ್ ರೇವಣ್ಣ ವಿರುದ್ಧದ 3ನೇ ಅತ್ಯಾಚಾರ ಪ್ರಕರಣದ ಚಾರ್ಜ್‌ಶೀಟ್ ಸಲ್ಲಿಕೆ

Ex MP Prajwal Revanna

Sampriya

ಬೆಂಗಳೂರು , ಶುಕ್ರವಾರ, 13 ಸೆಪ್ಟಂಬರ್ 2024 (19:49 IST)
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಮೂರನೇ ಅತ್ಯಾಚಾರ ಪ್ರಕರಣದ ದೋಷಾರೋಪ ಪಟ್ಟಿಯನ್ನು ಇಂದು ಎಸ್‌ಐಟಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ.

ಜಿಲ್ಲಾ ಪಂಚಾಯಿತಿ ಸದಸ್ಯೆ ನೀಡಿದ್ದ ದೂರಿನ ಮೇರೆಗೆ ಸಂತ್ರಸ್ತೆಯ ಸೀರೆಯನ್ನು ಪ್ರಮುಖ ಸಾಕ್ಷ್ಯ ಮಾಡಿಕೊಂಡು, 120 ಸಾಕ್ಷಿಗಳು, 1,691 ಪುಟಗಳ ಸುದೀರ್ಘ ದೋಷಾರೋಪ ಪಟ್ಟಿಯನ್ನು ಎಸ್‌ಐಟಿಯು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾದ ಪ್ರಮುಖ ಅಂಶಗಳು ಹೀಗಿವೆ. ಸಂತ್ರಸ್ತೆ ನೀಡಿದ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ಅದರಲ್ಲಿ ಗನ್ ಪಾಯಿಂಟ್‌ನಲ್ಲಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ.

ಅದಲ್ಲದೆ ಅತ್ಯಾಚಾರ ಎಸಗುತ್ತಿರುವ ವಿಡಿಯೋ ಮಾಡಿ, ಅದನ್ನು ವೈರಲ್ ಮಾಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿ ಪದೇ ಪದೇ ತನ್ನ ಮೇಲೆ ಸಂಸದ ಅತ್ಯಾಚಾರ ಎಸಗಿದ್ದಾನೆ.  ಸಂಸದ ಎಂಬ ಭಯದಿಂದ ದೂರು ಕೊಡದೆ ಸುಮ್ಮನಾಗಿರುವುದಾಗಿ ಸಂತ್ರಸ್ತೆ ಹೇಳಿಕೊಂಡಿದ್ದಾಳೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶ ಪೂಜೆ ಮಾಡಿದ್ದಕ್ಕೆ ಮೋದಿ ದೇಶದ ಕ್ಷಮೆ ಕೇಳಬೇಕು: ಉಗ್ರಪ್ಪ