Select Your Language

Notifications

webdunia
webdunia
webdunia
webdunia

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

CM Siddaramaiah

Sampriya

ಬೆಂಗಳೂರು , ಗುರುವಾರ, 16 ಅಕ್ಟೋಬರ್ 2025 (19:36 IST)
Photo Credit X
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಇಂದು ಪಾಲ್ಗೊಂಡು, ಮಾಹಿತಿ ನೀಡಿದರು.

ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಸಿಎಂ ಸಿದ್ದರಾಮಯ್ಯ ಅವರು ಸುಮಾರು 45ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು.

ಈ ವಿಚಾರವನ್ನು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.  ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿನೀಡಿದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ತಿಳಿಸಿದ್ದಾರೆ.

ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ.

ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿಗಳ ಜೊತೆ ಮಾಹಿತಿ ಹಂಚಿಕೊಳ್ಳಿ ಎಂದು ಜನತೆಯಲ್ಲಿ ಸಿಎಂ ಮನವಿ ಮಾಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು