ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

Sampriya
ಗುರುವಾರ, 16 ಅಕ್ಟೋಬರ್ 2025 (19:36 IST)
Photo Credit X
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಇಂದು ಪಾಲ್ಗೊಂಡು, ಮಾಹಿತಿ ನೀಡಿದರು.

ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಸಿಎಂ ಸಿದ್ದರಾಮಯ್ಯ ಅವರು ಸುಮಾರು 45ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು.

ಈ ವಿಚಾರವನ್ನು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.  ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿನೀಡಿದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ತಿಳಿಸಿದ್ದಾರೆ.

ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ.

ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿಗಳ ಜೊತೆ ಮಾಹಿತಿ ಹಂಚಿಕೊಳ್ಳಿ ಎಂದು ಜನತೆಯಲ್ಲಿ ಸಿಎಂ ಮನವಿ ಮಾಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ನೀವು ರಸ್ತೆ ಅಭಿವೃದ್ಧಿ ಮಾಡುವುದಾದರೆ ಮಾಡಿ: ಕಿರಣ್ ಮಜುಂದಾರ್‌ಗೆ ಡಿಕೆ ಶಿವಕುಮಾರ್ ಕೌಂಟರ್‌

ಮುಂದಿನ ಸುದ್ದಿ
Show comments