Publish Date: Wed, 07 Jan 2026 (16:44 IST)
Updated Date: Wed, 07 Jan 2026 (16:47 IST)
ಬೆಳಗಾವಿ: ಇಲ್ಲಿನ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿ, 6ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಈ ದುರ್ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದು, ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆಯೆಂದು ತಿಳಿದುಬಂದಿದೆ.
ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ ಆರು ಜನರನ್ನು ಝೀರೋ ಟ್ರಾಫಿಕ್‌ನಲ್ಲಿಯೇ ಬೈಲಹೊಂಗಲದಿಂದ ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಕ್ರಮ ಇನಾಮದಾರ್‌ಗೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದೆ.
ಘಟನೆ ಸಂಬಂಧ ಬೆಳಗಾವಿಯಲ್ಲಿ ಎಸ್ಪಿ ಕೆ ರಾಮರಾಜನ್ ಪ್ರತಿಕ್ರಿಯಿಸಿದ್ದು, ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.
8 ಜನರಿಗೆ ಬಿಸಿ ಪದಾರ್ಥ (ಮಳ್ಳಿ) ಮೈ ಮೇಲೆ ಬಿದ್ದು ಗಾಯವಾಗಿದೆ. ಒಬ್ಬರನ್ನು ಬೈಲಹೊಂಗಲ ಆಸ್ಪತ್ರೆಗೆ ರವಾನಿಸಿದ್ದು, ಇನ್ನುಳಿದವರನ್ನು ಬೆಳಗಾವಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.