Publish Date: Tue, 06 Aug 2019 (10:38 IST)
Updated Date: Tue, 06 Aug 2019 (10:40 IST)
ಕೋಲಾರ : ಚಲಿಸುತ್ತಿರುವ ಬಸ್ ನಲ್ಲಿಯೇ ಪ್ರೇಮಿಗಳಿಬ್ಬರು ಸಾರ್ವಜನಿಕರ ಮುಂದೆಯೇ ಅಸಭ್ಯವಾಗಿ ವರ್ತಿಸಿದ ಘಟನೆ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ನಡೆದಿದೆ.
ಪ್ರೇಮಿಗಳಿಬ್ಬರು ಬಂಗಾರಪೇಟೆಯವರು ಎಂಬುದಾಗಿ ತಿಳಿದುಬಂದಿದ್ದು, ಕೋಲಾರದಿಂದ ಬಂಗಾರಪೇಟೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಅತಿ ಹೆಚ್ಚು ಪ್ರಯಾಣಿಕರಿದ್ದರೂ ಕೂಡ ಅದನ್ನು ಲೆಕ್ಕಿಸದೆ ಮೈಮರೆತ ಪ್ರೇಮಿಗಳು ಪರಸ್ಪರ ಚುಂಬಿಸಿಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.
ಈ ಘಟನೆಯಿಂದ ಬಸ್ ನಲ್ಲಿದ್ದ ಪ್ರಯಾಣಿಕರು ಮುಜುಗರಕ್ಕೀಡಾಗಿದ್ದು, ಕೆಲವರು ಈ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಎನ್ನಲಾಗಿದೆ.