Webdunia - Bharat's app for daily news and videos

Install App

ದೇಶದ ಎರಡನೇ ಅತೀ ಎತ್ತರದ ಧ್ವಜಸ್ತಂಭ ವಿಜಯನಗರದಲ್ಲಿ ಗಣರಾಜ್ಯೋತ್ಸವ ವೇಳೆ ಇದೆಂಥಾ ಘಟನೆ

Sampriya
ಭಾನುವಾರ, 26 ಜನವರಿ 2025 (12:15 IST)
Photo Courtesy X
ವಿಜಯನಗರ: ದೇಶದ ಎರಡನೇ ಅತಿ ಎತ್ತರದ ಧ್ವಜಸ್ತಂಭ ಎಂಬ ಹೆಗ್ಗಳಿಕೆಗೆ ಪಾತ್ರವಾದ ವಿಜಯನಗರದಲ್ಲಿ ಭಾನುವಾರ ಗಣರಾಜ್ಯೋತ್ಸವ ನಡೆಯುತ್ತಿದ್ದ ವೇಳೆ ಬೃಹತ್ ಧ್ವಜ ಕುಸಿದು ಬಿದ್ದಿರುವ ಘಟನೆ ನಡೆದಿದೆ.

76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದ ಕೆಲ ಸಮಯದಲ್ಲೇ ಬೃಹತ್ ತ್ರಿವರ್ಣ ಧ್ವಜ ಧ್ವಜಸ್ತಂಭದಿಂದ ಕುಸಿದು ಬಿದ್ದ ಘಟನೆ ನಡೆದಿದೆ.

ವಿಜಯನಗರದ ಪುನೀತ್ ರಾಜ್ ಕುಮಾರ್ ಕ್ರೀಡಾಂಗಣದಲ್ಲಿರುವ ಧ್ವಜಸ್ತಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಮೀರ್ ಅಹ್ಮದ್ ಇಂದು ಸಾಂಕೇತಿಕವಾಗಿ ಧ್ವಜಾರೋಹಣ ನೆರವೇರಿಸಿದ್ದರು. ಧ್ವಜಾರೋಹಣದ ಬಳಿಕ ಪರೇಡ್ ವೀಕ್ಷಿಸಿ, ಸಚಿವರು ಗೌರವ ವಂದನೆ ಸ್ವೀಕರಿಸುತ್ತಿದ್ದರು.

ಈ ವೇಳೆ ಬೃಹತ್ ಧ್ವಜಸ್ತಂಭದಲ್ಲಿದ್ದ ಬೃಹತ್ ತ್ರಿವರ್ಣ ಧ್ವಜ ಏಕಾಏಕಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಅಪಾಯ ಸಂಭವಿಸಿಲ್ಲ. ಈ ವೇಳೆ ಗರಂ ಆದ ಸಚಿವರು ಧ್ವಜಸ್ತಂಭದಿಂದ ಧ್ವಜ ಬೀಳುವಂತೆ ಧ್ವಜ ಕಟ್ಟಿದ್ದು, ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments