Select Your Language

Notifications

webdunia
webdunia
webdunia
webdunia

ಮೊದಲಿನಿಂದಲೂ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ: ಜಿ.ಪರಮೇಶ್ವರ್

ಮೊದಲಿನಿಂದಲೂ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ: ಜಿ.ಪರಮೇಶ್ವರ್
ಮಂಡ್ಯ , ಶನಿವಾರ, 23 ಜುಲೈ 2016 (16:36 IST)
ನಾನು ಗೃಹ ಸಚಿವನಾದ ಬಳಿಕ ರಾಜ್ಯದಲ್ಲಿ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿಲ್ಲ. ಮೊದಲಿನಿಂದಲೂ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇವೆ ಎಂದು ಗೃಹ ಖಾತೆ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
 
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ಅಧಿಕಾರಿಗಳಿಗೆ ಯಾವುದೇ ತರಹದ ತೊಂದರೆಗಳಿದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ಅಥವಾ ಸರಕಾರದ ಗಮನಕ್ಕೆ ತಂದು ಸಮಸ್ಯೆಗಳ ಪರಿಹಾರ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಆಥ್ಮಹತ್ಯೆಗೆ ಶರಣಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
 
ಪೊಲೀಸ್ ಅಧಿಕಾರಿಗಳ ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಅನೇಕ ತಜ್ಞರ ಜೊತೆ ಚರ್ಚೆ ನಡೆಸಿದ್ದೇನೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ತರಲು ಅನೇಕ ಕ್ರಮಗಳನ್ನು ಕೈಗೊಂಡಿದ್ದೇನೆ. ಪೊಲೀಸರ ಕೆಲಸದ ಒತ್ತಡ ಕಡಿಮೆ ಮಾಡಲು ಶಾಸ್ವತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
 
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಮರಿಗೌಡನನ್ನು ಬಂದಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ, ಅವರು ಎಲ್ಲಿದ್ದಾರೆ ಎಂದು ತಿಳಿದು ಬಂದಿಲ್ಲ. ಅವರ ಮೊಬೈಲ್ ಟವರ್ ಲೋಕೆಷನ್ ಆಧಾರಿಸಿ ಅವರನ್ನು ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

1947 ರಿಂದಲೂ ಕಾಶ್ಮಿರಕ್ಕಾಗಿ ಪಾಕ್ ರೋಧಿಸುತ್ತಿದೆ: ಎನ್‌ಪಿಪಿ ಲೇವಡಿ