Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಫ್ಲೆಕ್ಸ್ಬ್ ತಯಾರಿಕಾ ಘಟಕಗಳ ಮೇಲೆ ದಿಢೀರ್ ದಾಳಿ

webdunia
ಸೋಮವಾರ, 1 ಆಗಸ್ಟ್ 2022 (21:01 IST)
flexb manufacturing
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶ್ಚಿಮ ವಲಯ ವ್ಯಾಪ್ತಿಯ ಗಾಂಧಿನಗರ ವಾರ್ಡ್ ಸಂ.94 ರ ವಾಪ್ತಿಯ ಶೇಷಾದ್ರಿಪುರ ಪೊಲೀಸ್ ಠಾಣೆಯ ಸುತ್ತಮುತ್ತಲಿನ ಪ್ರದೇಶದಲ್ಲಿರುವ 3 ಫ್ಲೆಕ್ಸ್/ಬ್ಯಾನರ್ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ 12 ಪ್ಲಾಸ್ಟಿಕ್ ರೋಲ್ ಗಳನ್ನು ಜಪ್ತಿ ಮಾಡಲಾಗಿದೆ. ನಗರದ ಸಾರ್ವಜನಿಕರ ಸ್ಥಳಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಸ್, ಪೋಸ್ಟರ್ಸ್ ಹಾಕುವುದನ್ನು ನಿಷೇಧಿಸಲಾಗಿದ್ದು,  ಪಾಲಿಕೆ ವ್ಯಾಪ್ತಿಯ ಎಲ್ಲಾ ವಲಯಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರುವುಗೊಳಿಸಲಾಗುತ್ತಿದೆ. ಈ ಸಂಬಂಧ ಇಂದು ವಲಯ ಆಯುಕ್ತರಾದ ಡಾ. ದೀಪಕ್, ಮಾಹಿತಿ ತಂತ್ರಜ್ಞಾನ ನಿರ್ದೇಶಕರಾದ ಸೂರ್ಯ ಸೇನ್ ರವರ ನೇತೃತ್ವದಲ್ಲಿ 3 ಫ್ಲೆಕ್ಸ್/ಬ್ಯಾನರ್ಸ್ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಲಾಗಿದೆ

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಶುಲ್ಕ ಕಟ್ಟುವುದಕ್ಕೆ ದಿನಾಂಕ ವಿಸ್ತಾರಣೆ