ಏಕಾಏಕಿ ಕೆಎಂಎಫ್‌ ಎಂಡಿ ವರ್ಗಾವಣೆ: ಸ್ಪಷ್ಟನೆ ಕೇಳಿದ ಆರ್‌ ಅಶೋಕ್‌

Sampriya
ಗುರುವಾರ, 5 ಡಿಸೆಂಬರ್ 2024 (19:24 IST)
ಬೆಂಗಳೂರು: ನಂದಿನಿ ಬ್ರ್ಯಾಂಡ್‌ ಅನ್ನು ಮಾರುಕಟ್ಟೆಗೆ ವಿಸ್ತರಿಸಲು ಅತ್ಯಂತ ಉತ್ಸಾಹ ಮತ್ತು ಬದ್ಧತೆ ತೋರಿದ್ದ ದಕ್ಷ ಅಧಿಕಾರಿ ಕೆಎಂಎಫ್‌ ಎಂಡಿ ಎಂಕೆ ಜಗದೀಶ್ ಅವರನ್ನು ವರ್ಗಾವಣೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರದ  ಮೇಲೆ ಹಲವು ಅನುಮಾನಗಳಿವೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಅತ್ಯಂತ ಬೇಡಿಕೆ ಇರುವ ರೆಡಿ ಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೋಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ 'ನಂದಿನಿ' ಬ್ರ್ಯಾಂಡ್ ನ ಮಾರುಕಟ್ಟೆ ವಿಸ್ತರಿಸಲು ಅತ್ಯಂತ ಉತ್ಸಾಹ ಮತ್ತು ಬದ್ಧತೆ ತೋರಿದ್ದ ದಕ್ಷ ಅಧಿಕಾರಿ ಕೆಎಂಎಫ್‌ ಎಂಡಿ ಶ್ರೀ ಎಂ.ಕೆ.ಜಗದೀಶ್ ಅವರನ್ನ ದಿಢೀರನೆ ವರ್ಗಾವಣೆ ಮಾಡಿರುವ ಕಾಂಗ್ರೆಸ್

 ಸರ್ಕಾರದ ನಿರ್ಧಾರ ಸಾರ್ವಜನಿಕರಲ್ಲಿ ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಈ ನಿರ್ಧಾರದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡವಿದೆಯಾ? ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ಪರಿಚಯಿಸಲು ಹೊರಟಿದ್ದ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬರದಂತೆ ಖಾಸಗಿ ಕಂಪನಿಗಳ ಲಾಭಿಗೆ ಸರ್ಕಾರ ಮಣಿದಿದೆಯಾ?

ಈ ಅನುಮಾನಗಳ ಕುರಿತಂತೆ ಮತ್ತು ನಂದಿನಿ ಬ್ರ್ಯಾಂಡ್ ನ ನೂತನ ಉತ್ಪನ್ನಗಳನ್ನು ಮಾರುಕಟ್ಟೆಗೆ ತರುವ ಯೋಜನೆಯಲ್ಲಿ ಏನಾದರೂ ಬದಲಾವಣೆ ಇದೆಯೇ ಎನ್ನುವ ಕುರಿತಂತೆ ಸಹಕಾರ ಸಚಿವ ಕೆಎನ್‌ ರಾಜಣ್ಣ ಅವರು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸುತ್ತೇನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments