ಸುದೀಪ್ ಬಿಜೆಪಿಗೆ ಬೆಂಬಲ ಅವರಿಗೆ ಸಹಿಸೋಕಾಗ್ತಿಲ್ಲ- ಬಿ.ಎಸ್. ಯಡಿಯೂರಪ್ಪ

Webdunia
ಗುರುವಾರ, 6 ಏಪ್ರಿಲ್ 2023 (19:30 IST)
ಬಿಜೆಪಿ ಪರ ನಟ ಸುದೀಪ್ ಪುಚಾರ ಮಾಡುವುದಾಗಿ ಘೋಷಣೆ ಮಾಡಿರುವುದನ್ನು ಲೇವಡಿ ಮಾಡಿರುವ ಕಾಂಗ್ರೆಸ್​ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಕಾಂಗ್ರೆಸ್‌ನವರಿಗೆ ತಲೆಕೆಟ್ಟು ಏನು ಬೇಕಾದ್ರೂ ಮಾತಾಡ್ತಾರೆ. ಚಲನಚಿತ್ರದಲ್ಲಿ ಖ್ಯಾತಿ ಪಡೆದಿರುವ ವ್ಯಕ್ತಿ ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂದು​ ಹೇಳಿದ್ದಾರೆ. ನಾವು ಅದನ್ನು ಸ್ವಾಗತ ಮಾಡುತ್ತೇವೆ. ಬಿಜೆಪಿಯವರಿಗೆ ಸಿಕ್ಕಿರುವ ಬೆಂಬಲವನ್ನು ಕಾಂಗ್ರೆಸ್‌ನವರಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದರು. ಇದೇ ಸಂದರ್ಭದಲ್ಲಿ ವಿ.ಸೋಮಣ್ಣ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ಏನು ಹೇಳುತ್ತದೋ ಅದರಂತೆ ನಡೆಯುತ್ತದೆ ಎಂದು ಹೇಳಿದರು. ಟಿಕೆಟ್ ಘೋಷಣೆ ಯಾವಾಗ ಎಂಬ ಪ್ರಶ್ನೆಗೆ ನಾಳೆ ಪಟ್ಟಿಯನ್ನು ಹೈಕಮಾಂಡ್‌ಗೆ ಕಳಿಸಿಕೊಡಲಾಗುತ್ತದೆ. ಫೈನಲ್ ಆದ ಬಳಿಕ ಘೋಷಣೆ ಮಾಡಲಾಗುತ್ತದೆ ಎಂದು ಬಿಎಸ್‌ ಯಡಿಯೂರಪ್ಪ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments