Publish Date: Thu, 05 Dec 2019 (10:37 IST)
Updated Date: Thu, 05 Dec 2019 (10:39 IST)
ಚಿಕ್ಕಬಳ್ಳಾಪುರ: ನಮ್ಮ ಎಲ್ಲಾ ಅನರ್ಹ ಶಾಸಕರ ಅಜ್ಞಾತವಾಸ ಇಂದಿಗೆ ಅಂತ್ಯವಾಗಲಿದೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವ ರಾಜಕಾರಣಿಗಳಿಗೆ ಈ ಚುನಾವಣಾ ಫಲಿತಾಂಶ ಆದರ್ಶವಾಗಲಿದೆ. ನಮ್ಮಂತವರಿಗೆ ಈ ಚುನಾವಣೆಯ ಮೂಲಕ ನ್ಯಾಯ ಸಿಗುವ ವಿಶ್ವಾಸವಿದೆ. ನಮ್ಮ ಎಲ್ಲಾ ಅನರ್ಹ ಶಾಸಕರ ಅಜ್ಞಾತವಾಸ ಇಂದಿಗೆ ಅಂತ್ಯವಾಗಲಿದೆ ಎಂದು ಹೇಳಿದ್ದಾರೆ.
ನನ್ನ ವಿರುದ್ಧ ಕಾಂಗ್ರೆಸ್ ಜೆಡಿಎಸ್ ನಾಯಕರು ಕೀಳು ಮಟ್ಟದ ರಾಜಕೀಯ ನಡೆಸಿದ್ದಾರೆ. ಸಿದ್ದರಾಮಯ್ಯ, ಡಿಕೆಶಿವಕುಮಾರ್, ಮತ್ತು ಹೆಚ್.ಡಿ.ಕುಮಾರಸ್ವಾಮಿ ತನ್ನ ಘನತೆಗೆ ತಕ್ಕಂತೆ ನಡೆದುಕೊಂಡಿಲ್ಲ. ಇವರು ನನ್ನ ಚಾರಿತ್ರ್ಯವಧೆಗೆ ಮುಂದಾಗಿದ್ದಾರೆ. ಇವರಿಗೆ ಜನರೇ ಉತ್ತರ ಕೊಡುತ್ತಾರೆ ಎಂದು ಅವರು ತಿಳಿಸಿದ್ದಾರೆ.