Daily Horoscope

ನಮ್ಮ ಎಲ್ಲಾ ಅನರ್ಹ ಶಾಸಕರ ಅಜ್ಞಾತವಾಸ ಇಂದಿಗೆ ಅಂತ್ಯವಾಗಲಿದೆ- ಡಾ.ಕೆ.ಸುಧಾಕರ್ ವಿಶ್ವಾಸ

Webdunia
ಗುರುವಾರ, 5 ಡಿಸೆಂಬರ್ 2019 (10:37 IST)
ಚಿಕ್ಕಬಳ್ಳಾಪುರ: ನಮ್ಮ ಎಲ್ಲಾ ಅನರ್ಹ ಶಾಸಕರ ಅಜ್ಞಾತವಾಸ ಇಂದಿಗೆ ಅಂತ್ಯವಾಗಲಿದೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ಚಿಕ್ಕಬಳ್ಳಾಪುರದಲ್ಲಿ ಮತದಾನ ಮಾಡಿದ  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವ ರಾಜಕಾರಣಿಗಳಿಗೆ ಈ ಚುನಾವಣಾ ಫಲಿತಾಂಶ ಆದರ್ಶವಾಗಲಿದೆ. ನಮ್ಮಂತವರಿಗೆ ಈ ಚುನಾವಣೆಯ ಮೂಲಕ ನ್ಯಾಯ ಸಿಗುವ ವಿಶ್ವಾಸವಿದೆ. ನಮ್ಮ ಎಲ್ಲಾ ಅನರ್ಹ ಶಾಸಕರ ಅಜ್ಞಾತವಾಸ ಇಂದಿಗೆ ಅಂತ್ಯವಾಗಲಿದೆ ಎಂದು ಹೇಳಿದ್ದಾರೆ.


ನನ್ನ ವಿರುದ್ಧ ಕಾಂಗ್ರೆಸ್ ಜೆಡಿಎಸ್ ನಾಯಕರು ಕೀಳು ಮಟ್ಟದ ರಾಜಕೀಯ ನಡೆಸಿದ್ದಾರೆ. ಸಿದ್ದರಾಮಯ್ಯ, ಡಿಕೆಶಿವಕುಮಾರ್, ಮತ್ತು ಹೆಚ್.ಡಿ.ಕುಮಾರಸ್ವಾಮಿ ತನ್ನ ಘನತೆಗೆ ತಕ್ಕಂತೆ ನಡೆದುಕೊಂಡಿಲ್ಲ. ಇವರು ನನ್ನ ಚಾರಿತ್ರ್ಯವಧೆಗೆ ಮುಂದಾಗಿದ್ದಾರೆ. ಇವರಿಗೆ ಜನರೇ ಉತ್ತರ ಕೊಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments