ಅನರ್ಹರು ಭಿಕ್ಷೆ ಬೇಡುತ್ತಿದ್ದಾರೆ ಎಂದ ದಿನೇಶ್ ಗುಂಡೂರಾವ್ ಗೆ ಬಿಸಿಮುಟ್ಟಿಸಿದ ಸುಧಾಕರ್

ಬುಧವಾರ, 18 ಸೆಪ್ಟಂಬರ್ 2019 (11:56 IST)
ಬೆಂಗಳೂರು : ಅನರ್ಹ ಶಾಸಕರು ಈಗ ಬಿಜೆಪಿಯವರ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆಗೆ ಅನರ್ಹ ಶಾಸಕ ಸುಧಾಕರ್ ಅವರು ಕಿಡಿಕಾರಿದ್ದಾರೆ.
ಅನರ್ಹ ಶಾಸಕರು ನಮ್ಮ ಪಕ್ಷದಲ್ಲಿದ್ದಾಗ ರಾಜರಂತೆ ಮೆರೆಯುತ್ತಿದ್ದರು. ಈಗ ಬಿಜೆಪಿಯವರ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಈ ಹಿಂದೆಯೇ ನಾನು ಈ ಕುರಿತು ಹೇಳಿದ್ದೆ. ಬಿಜೆಪಿ ನಂಬಿ ಹೋಗಬೇಡಿ ಎಂದು ಸಲಹೆ ನೀಡಿದ್ದೆ. ಈಗ ಹೋಗಿ ಬಿಜೆಪಿ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದರು.


ಇದಕ್ಕೆ ಪ್ರತಿಕ್ರಿಯಿಸಿದ ಅನರ್ಹ ಶಾಸಕ ಸುಧಾಕರ್, ಮಾನ್ಯ ದಿನೇಶ್ ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿತು ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಡಿಕೆಶಿ ಆಪ್ತೆ ಲಕ್ಷ್ಮಿ ಹೆಬ್ಬಾಳ್ಕರ್​ಗೂ ಇಡಿ ನೊಟೀಸ್​ ಜಾರಿ