ನಾನು ಶ್ರೀರಾಮುಲು ಸೋದರರಿದ್ದಂತೆ-ವದಂತಿಗೆ ಸ್ಪಷ್ಟನೆ ನೀಡಿದ ಸಚಿವ ಸುಧಾಕರ್

ಶನಿವಾರ, 4 ಏಪ್ರಿಲ್ 2020 (10:24 IST)
ಬೆಂಗಳೂರು : ನಾನು ಶ್ರೀರಾಮುಲು ಸೋದರರಿದ್ದಂತೆ. ನಮ್ಮ ಮಧ್ಯೆ ಯಾವುದೇ ಭಿನ್ನಮತ ಇಲ್ಲ ಎಂದು ಟ್ವೀಟರ್ ನಲ್ಲಿ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.


ಕೊರೊನಾ ಭೀತಿ ನಡುವೆ  ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ನಡುವೆ ವೈಮನಸ್ಸಿದೆ ಎಂಬ ವದಂತಿ ಎಲ್ಲಾ ಕಡೆ ಕೇಳಿಬಂದಿತ್ತು. ಇದಕ್ಕೆ ಇದೀಗ ಟ್ವೀಟರ್ ನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್, ಕೊರೊನಾ ವಿರುದ್ಧ ಟೊಂಕ ಕಟ್ಟಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ. ನಮಗೆ ನಮ್ಮದೇ ಆದ ಜವಾಬ್ದಾರಿಗಳಿವೆ. ವದಂತಿಗಳ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಭಾರತದಲ್ಲಿ ಕೊರೊನಾಗೆ ಮತ್ತೊಂದು ಬಲಿ; ಮೃತರ ಸಂಖ್ಯೆ 87ಕ್ಕೆ ಏರಿಕೆ