ಬೆಂಗಳೂರು: ಅನ್ಯಕೋಮಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಪ್ರಕರಣ ದಾಖಲಾಗಿದ್ದ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರ ಶ್ರೀಗಳು ಅನಾರೋಗ್ಯ ಕಾರಣ ನೀಡಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾರೆ.
ಶ್ರಿಗಳು ಉಪ್ಪಾರಪೇಟೆ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಬರೆದ ಪತ್ರದಲ್ಲಿ, ನಾನು ಮಾರಕ ರೋಗ ಕ್ಯಾನ್ಸರ್‌ನಿಂದ ಬಳಲುತ್ತಿದ್ದೇನೆ. ವೈದ್ಯರು 10 ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದರಿಂದ ವಿಚಾರಣೆಗೆ ಬರಲು ಸಾಧ್ಯವಾಗುತ್ತಿಲ್ಲ. ಡಿ.18ರಂದು ವಿಚಾರಣೆಗೆ ಹಾಜರಾಗಲು ಸಿದ್ಧನಿದ್ದೇನೆ. ಅಷ್ಟರೊಳಗೆ ವಿಚಾರಣೆ ನಡೆಸುವುದು ಅವಶ್ಯವೆನಿಸಿದಲ್ಲಿ ಮಠಕ್ಕೆ ಬರಬಹುದು. ಮಠಕ್ಕೆ ಬಂದು ಹೇಳಿಕೆ ದಾಖಲಿಸಿಕೊಳ್ಳಲು ಅಭ್ಯಂತರವಿಲ್ಲ. ಇಂದು (ಸೋಮವಾರ) ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಲಾಗಿದೆ.
ಸ್ವಾಮೀಜಿ ನೀಡಿದ ವಿವಾದಾತ್ಮಕ ಹೇಳಿಕೆ ಹೀಗಿದೆ: ನಗರದ ಫ್ರೀಡಂ ಪಾರ್ಕ್‍ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ್ದ ಅವರು ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ ಎಂದಿದ್ದರು.