Webdunia - Bharat's app for daily news and videos

Install App

ಕ್ಯಾನ್ಸರ್‌ನಿಂದ ಬಳಲುತ್ತಿದ್ದೇನೆ: ವಿಚಾರಣೆಗೆ ವಿನಯಿತಿ ನೀಡಲು ಚಂದ್ರಶೇಖರ ಶ್ರೀ ಮನವಿ

Sampriya
ಸೋಮವಾರ, 2 ಡಿಸೆಂಬರ್ 2024 (17:57 IST)
Photo Courtesy X
ಬೆಂಗಳೂರು: ಅನ್ಯಕೋಮಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಪ್ರಕರಣ ದಾಖಲಾಗಿದ್ದ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರ ಶ್ರೀಗಳು ಅನಾರೋಗ್ಯ ಕಾರಣ ನೀಡಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಶ್ರಿಗಳು ಉಪ್ಪಾರಪೇಟೆ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಬರೆದ ಪತ್ರದಲ್ಲಿ, ನಾನು ಮಾರಕ ರೋಗ ಕ್ಯಾನ್ಸರ್‌ನಿಂದ ಬಳಲುತ್ತಿದ್ದೇನೆ. ವೈದ್ಯರು 10 ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದರಿಂದ ವಿಚಾರಣೆಗೆ ಬರಲು ಸಾಧ್ಯವಾಗುತ್ತಿಲ್ಲ. ಡಿ.18ರಂದು ವಿಚಾರಣೆಗೆ ಹಾಜರಾಗಲು ಸಿದ್ಧನಿದ್ದೇನೆ. ಅಷ್ಟರೊಳಗೆ ವಿಚಾರಣೆ ನಡೆಸುವುದು ಅವಶ್ಯವೆನಿಸಿದಲ್ಲಿ ಮಠಕ್ಕೆ ಬರಬಹುದು. ಮಠಕ್ಕೆ ಬಂದು ಹೇಳಿಕೆ ದಾಖಲಿಸಿಕೊಳ್ಳಲು ಅಭ್ಯಂತರವಿಲ್ಲ. ಇಂದು (ಸೋಮವಾರ) ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಲಾಗಿದೆ.

ಸ್ವಾಮೀಜಿ ನೀಡಿದ ವಿವಾದಾತ್ಮಕ ಹೇಳಿಕೆ ಹೀಗಿದೆ: ನಗರದ ಫ್ರೀಡಂ ಪಾರ್ಕ್‍ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ್ದ ಅವರು ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ ಎಂದಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments