Publish Date: Wed, 27 Dec 2017 (17:56 IST)
Updated Date: Wed, 27 Dec 2017 (17:58 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಬಲದಿಂದ ಸಮಾಜದಲ್ಲಿ ಜಾತಿಯ ವಿಷಬೀಜ ಬಿತ್ತುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಹೊನ್ನಾಳಿಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರು ಅಧಿಕಾರ, ಹಣ, ಹೆಂಡದಿಂದ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದೆಂದು ಭಾವಿಸಿದ್ದಾರೆ. ಅದು ಸಾಧ್ಯವಿಲ್ಲ ಎಂದು ಗುಡುಗಿದರು
ಮಲಪ್ರಭಾ ಘಟಪ್ರಭಾ ಗುತ್ತಿಗೆ ಕೊಟ್ಟಿರುವುದರಿಂದ ₹ 500 ಕೋಟಿ ಹೆಚ್ಚು ಯೋಜನಾ ವೆಚ್ಚ ಮಾಡಿ, ನೀರಾವರಿ ಸಚಿವ ಎಂ.ಬಿ ಪಾಟೀಲ್ ಹಾಗೂ ಸಿದ್ದರಾಮಯ್ಯ ಲೂಟಿ ಹೊಡೆದಿದ್ದಾರೆ ಎಂದು ದೂರಿದ್ದಾರೆ.
ಮಹಾದಾಯಿ ವಿಚಾರದ ಬಗ್ಗೆ ಎಲ್ಲಾ ಕಡೆ ಚರ್ಚೆಯಾಗುತ್ತಿದೆ. ಮೂವತ್ತು ವರ್ಷದ ಬಳಿಕ ಗೋವಾದ ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ನವರು ವಿರೋಧ ಮಾಡುತ್ತಿದ್ದಾರೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.