Select Your Language

Notifications

webdunia
webdunia
webdunia
webdunia

ಮದುವೆ ಸಾಲ ತೀರಿಸಲಾಗದೇ ಆತ್ಮಹತ್ಯೆ

Suicide due to inability to pay marriage debt
ಹಾವೇರಿ , ಶುಕ್ರವಾರ, 24 ಫೆಬ್ರವರಿ 2023 (14:44 IST)
ಸುಮಾರು 25 ಲಕ್ಷ ರೂಪಾಯಿ ಸಾಲವನ್ನು ಮಾಡಿ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಿದ್ದು, ನಂತರ ಸಾಲ ತೀರಿಸಲಾಗದೇ ಇಡೀ ಕುಟುಂಬ ಸಮೇತರಾಗಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ. ಸಾಲ ಬಾಧೆಯನ್ನು ತಾಳಲಾರದೇ ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯಿಂದ ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ತಂದೆ ಹನುಮಂತಗೌಡ ಪಾಟೀಲ, ತಾಯಿ ಲಲಿತಾ ಪಾಟೀಲ ಮತ್ತು ಮಗಳು ನೇತ್ರಾ ಪಾಟೀಲ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಘಟನಾ ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆ ಹೊಸ್ತಿಲಲ್ಲಿ ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಧರ್ಮ ದಂಗಲ್