ಧರ್ಮಸ್ಥಳದಲ್ಲಿ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದ ಸುಜಾತಾ ಭಟ್‌ಗೆ ಎದುರಾಯಿತು ವಿಚಾರಣೆ

Sampriya
ಶುಕ್ರವಾರ, 22 ಆಗಸ್ಟ್ 2025 (16:05 IST)
Photo Credit X
ಮಂಗಳೂರು: ಕೆಲ ವರ್ಷಗಳ ಹಿಂದೆ ಧರ್ಮಸ್ಥಳಕ್ಕೆ ತೆರಳಿದ್ದ ನನ್ನ ಮಗಳು ನಾಪತ್ತೆಯಾಗಿದ್ದಳು ಎಂದು ಎಸ್‌ಐಟಿ ಬಳಿ ಹೇಳಿಕೆ ನೀಡಿದ್ದ ಸುಜಾತಾ ಭಟ್‌ಗೆ ಇದೀಗ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. 

ಅನನ್ಯಾ ಭಟ್ ನಾಪತ್ತೆ ವಿಚಾರದಲ್ಲಿ ಮಾಧ್ಯಮದಲ್ಲಿ  ದಿನಕ್ಕೊಂದು ವಿಚಾರಗಳು ಬಯಲಾಗುತ್ತಿದ್ದು ಇದೀಗ ಈ ಸಂಬಂಧ ಎಸ್‌ಐಟಿ ಮುಂದೇ ವಿಚಾರಣೆಗೆ ಹಾಜರಾಗುವಂತೆ ಸುಜಾತಾ ಭಟ್‌ಗೆ ನೋಟಿಸ್ ನೀಡಲಾಗಿದೆ. 

ಯಾರದ್ದೋ ಮನೆಯ ಸೊಸೆ ಫೋಟೋ ತೋರಿಸಿ ತಮ್ಮ ಮಗಳು ಎನ್ನುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ವಸಂತಾ ಎಂಬುವವರ ಸಹೋದರ ನನ್ನ ತಂಗಿ ಫೋಟೋ ಬಳಸಿಕೊಂಡಿದ್ದಾರೆ ಅಂತ ಆರೋಪ ಮಾಡಿದ್ರು. ಇದೀಗ ಅನನ್ಯಾ ಭಟ್‌ ಅವರ ನಾಪತ್ತೆ ವಿಚಾರಣೆ ಬಗ್ಗೆ ತಿಳಿದುಕೊಳ್ಳಲು ಎಸ್‌ಐಟಿ ಮುಂದಾಗಿದೆ. 

ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ ಸುಜಾತಾ ಭಟ್‌ ಅವರಿಗೆ ನೋಟಿಸ್‌ ನೀಡಿದೆ. 

ಬೆಳ್ತಂಗಡಿ ಕಚೇರಿ ಸಿಬ್ಬಂದಿ ಬೆಂಗಳೂರಿಗೆ ಬಂದು ನೋಟಿಸ್‌ ಜಾರಿಮಾಡಿದ್ದಾರೆ. ನೋಟೀಸ್ ಸ್ವೀಕರಿಸಿ ಶೀಘ್ರದಲ್ಲೇ ವಿಚಾರಣೆಗೆ ಬರೋದಾಗಿ ಸುಜಾತ ಭಟ್ ತಿಳಿಸಿದ್ದಾರೆ. 

ಈಗಾಗಲೇ ಅನನ್ಯಾ ಭಟ್ ಅಸ್ತಿತ್ವದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಶಿವಮೊಗ್ಗ, ಬೆಂಗಳೂರು, ಉಡುಪಿಯಲ್ಲಿ ದಾಖಲೆ ಸಂಗ್ರಹಿಸಿದೆ.

ಈ ಮಾಹಿತಿಗಳ ಆಧಾರದಲ್ಲಿ ಸುಜಾತ್ ಭಟ್‌ರನ್ನ ವಿಚಾರಣೆ ನಡೆಸುವ ಸಾಧ್ಯತೆ ಇದ್ದು, ವಿಚಾರಣೆ ಬಳಿಕ ಸುಜಾತ ಭಟ್ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. 0<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments