ಸೂಲಗಿತ್ತಿ‌ ನರಸಮ್ಮ ಇನ್ನಿಲ್ಲ

ಬುಧವಾರ, 26 ಡಿಸೆಂಬರ್ 2018 (06:55 IST)
ಬೆಂಗಳೂರು : ಡಾ.ಸೂಲಗಿತ್ತಿ‌ ನರಸಮ್ಮ (98) ಮಂಗಳವಾರ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ.


ನರಸಮ್ಮ 4 ಮಂದಿ ಹೆಣ್ಣು ಮಕ್ಕಳು, 4 ಮಂದಿ ಗಂಡು ಮಕ್ಕಳು ಮೊಮ್ಮಕ್ಕಳು, ಮರಿಮೊಮ್ಮಕ್ಕಳನ್ನು ಆಗಲಿದ್ದಾರೆ. ಇವರು ಅನೇಕ ಹೆಣ್ಣುಮಕ್ಕಳ ಹೆರಿಗೆಯನ್ನು ಮಾಡಿಸಿದ್ದು, ಅವರ ಈ ಸಮಾಜ ಸೇವೆಯನ್ನು ಮೆಚ್ಚಿ ಸರ್ಕಾರ ಅವರಿಗೆ ಪದ್ಮಶ್ರೀ ಪುರಸ್ಕಾರವನ್ನು ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಗ್ರಾಮ ಲೆಕ್ಕಾಧಿಕಾರಿಯ ಮೇಲೆ ಲಾರಿ ಹರಿಸಿರುವ ಪ್ರಕರಣ; ಕಾಂಗ್ರೆಸ್​ ಶಾಸಕನಿಂದ ವಿವಾದಾತ್ಮಕ ಹೇಳಿಕೆ