ಮಂಡ್ಯ ರಾಜಕೀಯ ಮತ್ತೆ ಸದ್ದು: ನಾಳೆ ಸುಮಲತಾ ಭವಿಷ್ಯ ತೀರ್ಮಾನ

Krishnaveni K
ಶನಿವಾರ, 10 ಫೆಬ್ರವರಿ 2024 (11:27 IST)
ಮಂಡ್ಯ: ಮಂಡ್ಯಲೋಕಸಭೆ ಚುನಾವಣೆ ಕಣ ಪ್ರತೀ ಬಾರಿಯೂ ರಂಗೇರುತ್ತದೆ. ಈ ಬಾರಿಯೂ ಇದು ಮುಂದುವರಿದಿದೆ. ಬಿಜೆಪಿ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ನಡುವೆ ಮಂಡ್ಯ ಕ್ಷೇತ್ರಕ್ಕಾಗಿ ತೀವ್ರ ಪೈಪೋಟಿಯಿದೆ.

ಹಾಲಿ ಸಂಸದೆ ಸುಮಲತಾ ಮಂಡ್ಯ ಬಿಟ್ಟು ಹೋಗಲು ತಯಾರಿಲ್ಲ. ಇತ್ತ ಜೆಡಿಎಸ್ ಗೆ ತನ್ನ ಭದ್ರಕೋಟೆ ಮಂಡ್ಯ ಬಿಟ್ಟುಕೊಡುವ ಮನಸ್ಸಿಲ್ಲ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಈ ಕ್ಷೇತ್ರದ ಟಿಕೆಟ್ ಯಾರಿಗೆ ಎನ್ನುವುದು ಕಗ್ಗಂಟಾಗಿದೆ. ಇದೇ ಕಾರಣಕ್ಕೆ ಸುಮಲತಾ ದೆಹಲಿಗೆ ಹೋಗಿ ಪ್ರಧಾನಿ ಮೋದಿ ಬಳಿಯೇ ಮಾತನಾಡಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಮಾತುಕತೆ ನಡೆಸಿ ಬಂದಿದ್ದಾರೆ. ಮೋದಿ ಕೂಡಾ ಸುಮಲತಾಗೆ ಒಟ್ಟಿಗೇ ಕೆಲಸ ಮಾಡುವುದನ್ನು ಮುಂದುವರಿಸೋಣ ಎಂದು ಭರವಸೆ ನೀಡಿದ್ದಾರೆ.

ಸುಮಲತಾ ಭವಿಷ್ಯ ನಾಳೆ ನಿರ್ಧಾರ
ಲೋಕಸಭೆ ಚುನಾವಣೆ ವಿಚಾರವಾಗಿ ರಾಜ್ಯಕ್ಕೆ ಇಂದು ಆಗಮಿಸುತ್ತಿರುವ ಗೃಹ ಸಚಿವ ಅಮಿತ್ ಶಾ ಟಿಕೆಟ್ ಹಂಚಿಕೆ ಕುರಿತೂ ನಾಳೆ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ನಾಳೆ ಮೈಸೂರಿನಲ್ಲಿ ಸರಣಿ ಸಭೆ ನಡೆಸಲಿದ್ದು, ಇದೇ ಸಂದರ್ಭದಲ್ಲಿ ಸುಮಲತಾ ವಿಚಾರವೂ ತೀರ್ಮಾನವಾಗಲಿದೆ. ಮಂಡ್ಯ ಕ್ಷೇತ್ರದಿಂದ ಸುಮಲತಾಗೆ ಟಿಕೆಟ್ ನೀಡುವುದೋ, ಜೆಡಿಎಸ್ ಗೆ ಬಿಟ್ಟುಕೊಡುವುದೋ ಎಂಬುದು ನಾಳೆ ತೀರ್ಮಾನವಾಗಲಿದೆ.

ಒಂದು ವೇಳೆ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟರೆ ಸುಮಲತಾ ಸಮಾಧಾನಿಸಲು ರಾಜ್ಯಸಭೆ ಟಿಕೆಟ್ ನೀಡಿದರೂ ಅಚ್ಚರಿಯಿಲ್ಲ. ಅದೂ ಇಲ್ಲದೇ ಹೋದರೆ ಸುಮಲತಾ ಸ್ವತಂತ್ರವಾಗಿ ಸ್ಪರ್ಧಿಸಲೂ ಮುಂದಾಗಬಹುದು. ಹೀಗಾಗಿ ಮಂಡ್ಯ ರಣ ಕಣದ ಬಗ್ಗೆ ನಾಳೆ ಸ್ಪಷ್ಟ ಚಿತ್ರಣ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲೇಷ್ಯಾದ ಪಿಎಂ ಅನ್ವರ್‌ರೊಂದಿಗೆ ಪ್ರಧಾನಿ ಮೋದಿ ಕಾರಿನಲ್ಲಿ ಪ್ರಯಾಣ

ಮೆಟ್ರೋ ಪ್ರಯಾಣ ದರ ಏರಿಕೆ ಚಿಂತೆಯಲ್ಲಿದ್ದವರಿಗೆ ಸ್ವಲ್ಪ ರಿಲ್ಯಾಕ್ಸ್‌

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ಪ್ರಶ್ನೆಗೊಳಗಾದ ಕಾಂಗ್ರೆಸ್ ಸಂಸದ

ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಹಿಗ್ಗಾಮುಗ್ಗಾ ವಾಗ್ದಾಳಿ

ಜಿಬಿಎಯಲ್ಲೂ ಬಿಜೆಪಿ ಜಯಭೇರಿ ಬಾರಿಸಲು ಒಳ್ಳೆಯ ಅವಕಾಶ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments