Daily Horoscope
✕

ಮಂಡ್ಯ ಟಿಕೆಟ್ ಯಾರಿಗೆ? ಸುಮಲತಾ ಭವಿಷ್ಯ ಇಂದು ನಿರ್ಧಾರ

Krishnaveni K
ಭಾನುವಾರ, 4 ಫೆಬ್ರವರಿ 2024 (10:04 IST)
ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಈಗ ಹಾಲಿ ಸಂಸದೆ ಸುಮಲತಾ ಅಂಬರೀಶ್ ಗೆ ಉರುಳಾಗಿದೆ.

ಮಂಡ್ಯ ಟಿಕೆಟ್ ಗಾಗಿ ಸುಮಲತಾ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿಯಿದೆ. ಕಳೆದ ಬಾರಿ ಇದೇ ಕ್ಷೇತ್ರದಲ್ಲಿ ಜೆಡಿಎಸ್ ಸುಮಲತಾ ಎದುರು ಸೋತಿತ್ತು. ಆದರೆ ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಜೆಡಿಎಸ್ ಆ ಕ್ಷೇತ್ರಕ್ಕೆ ಬೇಡಿಕೆಯಿಟ್ಟಿದೆ. ಆದರೆ ಈಗ ಬಿಜೆಪಿ ಸೇರಿರುವ ಸುಮಲತಾಗೆ ಮಂಡ್ಯ ಬಿಟ್ಟುಕೊಡುವ ಮನಸ್ಸಿಲ್ಲ. ಸ್ಪರ್ಧಿಸಿದರೆ ಮಂಡ್ಯದಿಂದಲೇ ಎಂದು ಪಟ್ಟುಹಿಡಿದಿದ್ದಾರೆ. ಇದಕ್ಕೆ ಅವರಿಗೆ ಸ್ಥಳೀಯ ನಾಯಕರ ಬೆಂಬಲವೂ ಇದೆ.

ಇಂದು ನಡೆಯಲಿದೆ ಮಹತ್ವದ ಸಭೆ
ಜೆಡಿಎಸ್ ಈಗಾಗಲೇ ಮಂಡ್ಯ, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬೇಡಿಕೆಯಿಟ್ಟಿದೆ. ಆದರೆ ಮಂಡ್ಯದಲ್ಲಿ ಟಿಕೆಟ್ ಜೆಡಿಎಸ್ ಗೆ ಬಿಟ್ಟು ಕೊಡುವುದಕ್ಕೆ ಬಿಜೆಪಿಯ ಸ್ಥಳೀಯ ನಾಯಕರಿಂದ ವಿರೋಧವಿದೆ. ಹೀಗಾಗಿ ಇದು ಸುಮಲತಾಗೆ ಪ್ಲಸ್ ಪಾಯಿಂಟ್ ಆಗಬಹುದು. ಇಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿ ಜಿಲ್ಲಾ ನಾಯಕರು ಸಭೆ ನಡೆಸಲಿದ್ದು, ತಮ್ಮ ಅಂತಿಮ ನಿರ್ಧಾರ ಮಾಡಲಿದ್ದಾರೆ. ಹೀಗಾಗಿ ಮಂಡ್ಯದಲ್ಲಿ ಸುಮಲತಾ ಇರುತ್ತಾರೆಯೇ ಜೆಡಿಎಸ್ ಬರುತ್ತದೆಯೇ ಎನ್ನುವುದಕ್ಕೆ ಇಂದು ಒಂದು ಹಂತದ ಉತ್ತರ ಸಿಗಲಿದೆ.

ಸುಮಲತಾಗೆ ಕಾಂಗ್ರೆಸ್ ಬಾಗಿಲು ಕೂಡಾ ಬಂದ್ ಆಗಿರುವುದರಿಂದ ಅವರ ಸ್ಪರ್ಧೆ ವಿಚಾರ ಅತಂತ್ರವಾಗಿದೆ. ಮಂಡ್ಯ ಬಿಟ್ಟರೆ ಸುಮಲತಾಗೆ ಬಿಜೆಪಿಯೇನೋ ಬೇರೆ ಕಡೆ ಟಿಕೆಟ್ ಆಫರ್ ನೀಡಬಹುದು. ಆದರೆ ಅವರು ಅಲ್ಲಿಂದ ಸ್ಪರ್ಧಿಸುವ ಸಾಧ‍್ಯತೆಯಿಲ್ಲ. ಹೀಗಾಗಿ ಇಂದಿನ ಸಭೆ ಮಹತ್ವ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments