ಬಿಜೆಪಿ ವರಿಷ್ಠರ ಭೇಟಿ ಬಳಿಕ ಸುಮಲತಾ ಅಚ್ಚರಿಯ ಹೇಳಿಕೆ

Krishnaveni K
ಸೋಮವಾರ, 18 ಮಾರ್ಚ್ 2024 (17:40 IST)
Photo Courtesy: Twitter
ಮಂಡ್ಯ: ಬಿಜೆಪಿ ಹೈಕಮಾಂಡ್ ಭೇಟಿ ಬಳಿಕ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಂಡ್ಯ ಟಿಕೆಟ್ ಇನ್ನೂ ಯಾರಿಗೆ ಎಂದು ತೀರ್ಮಾನವಾಗಿಲ್ಲ ಎಂದಿದ್ದಾರೆ.

ಒಂದೆಡೆ ಮಂಡ್ಯ ಟಿಕೆಟ್ ಗಾಗಿ ಜೆಡಿಎಸ್ ಪೈಪೋಟಿ ನಡೆಸಿದೆ. ಜೆಡಿಎಸ್ ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕೆಲಸವನ್ನೂ ಶುರು ಮಾಡಿದೆ. ಆದರೆ ಈ ನಡುವೆ ಸುಮಲತಾ ಮಾತ್ರ ಮಂಡ್ಯದಿಂದ ಬಿಜೆಪಿ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ. ಇತ್ತೀಚೆಗೆ ಮಂಡ್ಯ ಟಿಕೆಟ್ ಜೆಡಿಎಸ್ ಗೇ ಎಂದು ಬಿಜೆಪಿಯಂದಲೇ ಸೂಚನೆ ಬಂದಿತ್ತು.

ಆದರೆ ಸುಮಲತಾ ಈ ಬಗ್ಗೆ ಅಸಮಾಧಾನಗೊಂಡಿದ್ದು, ಅವರಿಗೆ ದೆಹಲಿಗೆ ಬಂದು ಮಾತುಕತೆ ನಡೆಸುವಂತೆ ಬುಲಾವ್ ನೀಡಲಾಗಿತ್ತು. ಅದರಂತೆ ಇಂದು ಸುಮಲತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ ಅವರು ನೀಡಿದ ಹೇಳಿಕೆ ಅಚ್ಚರಿ ಮೂಡಿಸಿದೆ.

ಮಂಡ್ಯ ಟಿಕೆಟ್ ಬಗ್ಗೆ ಇನ್ನೂ ಏನೂ ತೀರ್ಮಾನವಾಗಿಲ್ಲ. ಅದನ್ನು ನನಗೇ ನೀಡುವಂತೆ ಕೇಳಿದ್ದೇನೆ. ಈವತ್ತು ಸಂಜೆ ಸಭೆಯ ನಂತರ ನಿರ್ಧಾರವಾಗಲಿದೆ. ಮೋದಿಯವರೂ ನನಗೆ ಭರವಸೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿಯಿಂದ ದೂರವಾಗಲ್ಲ. ನನ್ನ ಕ್ಷೇತ್ರದ ಕಾರ್ಯಕರ್ತರ ಜೊತೆ ಚರ್ಚಿಸಿ ನಿರ್ಧಾರ ಮಾಡುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರೂರ್ ಕಾಲ್ತುಳಿತ: ಸಂತ್ರಸ್ತರ ಭೇಟಿಗೆ ವ್ಯವಸ್ಥೆ ಮಾಡಿದ ನಟ ವಿಜಯ್

ಯಮುನಾ ನೀರು ಶುದ್ಧವಾಗಿದೆಯೆಂದ ರೇಖಾ ಗುಪ್ತಾ ಕುಡಿದು ತೋರಿಸಲಿ: ಆ್ಯಪ್ ಸವಾಲು

7 ವರ್ಷದ ಬಾಲಕಿಯನ್ನು ಕೊಚ್ಚಿ ಕೊಂದ ಮಲತಂದೆ, ಕಾರಣ ಕೇಳಿದ್ರೆ ಶಾಕ್‌

ಉ.ಪ್ರದೇಶ: 5 ದೇವಸ್ಥಾನದ ಗೋಡೆಯಲ್ಲಿ ಐ ಲವ್ ಮುಹಮ್ಮದ್ ಬರಹ, ಉದ್ವಿಗ್ನ ವಾತಾವರಣ ಸೃಷ್ಟಿ

Kurnool Bus Accident: ಡಿಕ್ಕಿ ಹೊಡೆದ ಬೈಕ್ ಸವಾರರ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments