ಮಂಡ್ಯದಲ್ಲಿ ಕೈ ತಪ್ಪಿದ ಟಿಕೆಟ್: ಸುಮಲತಾ ಮುನಿಸು

Krishnaveni K
ಶನಿವಾರ, 13 ಜನವರಿ 2024 (11:01 IST)
Photo Courtesy: facebook
ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಟಿಕೆಟ್ ಗಾಗಿ ಸುಮಲತಾ ಅಂಬರೀಶ್ ಮತ್ತು ಎಚ್.ಡಿ. ಕುಮಾರಸ್ವಾಮಿ ನಡುವೆ ಪೈಪೋಟಿ ಏರ್ಪಟ್ಟಿದೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ನಿಂದ ಮಂಡ್ಯ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆದಿತ್ತು.

ಈ ವೇಳೆ ಸುಮಲತಾ ಬಗ್ಗೆ ಜೆಡಿಎಸ್ ನಾಯಕರು ಆಕ್ಷೇಪಾರ್ಹ ಹೇಳಿಕೆಗಳನ್ನೂ ನೀಡಿದ್ದರು. ಇದೀಗ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ನಾಯಕ ಕುಮಾರಸ್ವಾಮಿ ಮತ್ತೆ ತಮ್ಮ ಮೆಚ್ಚಿನ ಕ್ಷೇತ್ರ ಮಂಡ್ಯದಿಂದ ತಾವೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅತ್ತ ಸುಮಲತಾಗೂ ತಮ್ಮ ಮೆಚ್ಚಿನ ಕ್ಷೇತ್ರ ಮಂಡ್ಯ ಬಿಟ್ಟುಕೊಡುವ ಮನಸ್ಸಿಲ್ಲ.

ಇದೀಗ ಸುಮಲತಾ ಬಿಜೆಪಿ ಸೇರಿದ್ದಾರೆ. ಆದರೆ ಇದುವೇ ಅವರಿಗೆ ಮುಳುವಾಗಿದೆ.  ಮಂಡ್ಯ ಕ್ಷೇತ್ರ ಬಿಟ್ಟುಕೊಡುವುದು ಅವರಿಗೆ ಕೊಂಚವೂ ಇಷ್ಟವಿಲ್ಲ. ಹೀಗಾಗಿ ಸುಮಲತಾ ಅಸಮಾಧಾನಗೊಂಡಿದ್ದು, ಸದ್ಯದಲ್ಲೇ ಬಿಜೆಪಿ ರಾಜ್ಯಾಧ‍್ಯಕ್ಷ ವಿಜಯೇಂದ್ರರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಹಾಗೆಲ್ಲಾ ಮಾಡಲ್ಲ: ಉಗ್ರ ಮಹಿಳಾ ನಾಯಕಿ ಡಾ ಶಾಹೀನ್ ತಂದೆಯ ವಾದ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ ಆರಂಭ, ಈ ಬಾರಿ ಹೊಸ ನಿಯಮವೇನು ಇಲ್ಲಿದೆ ವಿವರ

ಬಿಹಾರ ಚುನಾವಣೆ ನಂತರ ರಾಹುಲ್ ಗಾಂಧಿ ಭವಿಷ್ಯವೇ ಬದಲಾಗಬಹುದು

ಆಪರೇಷನ್ ಸಿಂಧೂರ್ ಗೆ ಮೊದಲು ಆಪರೇಷನ್ indoor ಮಾಡಬೇಕಿದೆ

ಮುಂದಿನ ಸುದ್ದಿ
Show comments